ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಅನಾಥರಾಗಿರುವ ಮಕ್ಕಳು ಮತ್ತು ಅವರ ಕುಟುಂಬ ಸದಸ್ಯರನ್ನು ವಿವಿಧ ಕಲ್ಯಾಣ ಯೋಜನೆಗಳಿಗೆ ಸೇರ್ಪಡೆ ಮಾಡುವಂತೆ ಸುಪ್ರೀಂಕೋರ್ಟ್ ಸೋಮವಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಅವರ ಪೀಠವು, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ವಿವಿಧ ಯೋಜನೆಗಳಿಗೆ ಮಗು ಮತ್ತು ಅವನ ಅಥವಾ ಅವಳ ಕುಟುಂಬ ಸದಸ್ಯರನ್ನು ಸೇರ್ಪಡೆ ಮಾಡಲು ವಿವಿಧ ಶಿಫಾರಸುಗಳನ್ನು ಮಾಡಿ 19,825 ಪತ್ರಗಳನ್ನು ವಿವಿಧ ಜಿಲ್ಲಾ ಅಧಿಕಾರಿಗಳಿಗೆ ಬರೆದಿದೆ.
ಈ ವಿಷಯದ ಕುರಿತು ಎನ್‌ಸಿಪಿಸಿಆರ್ ಸಲ್ಲಿಸಿದ ವರದಿಯನ್ನು ಪೀಠವು ಪರಿಶೀಲಿಸಿದ್ದು, ಎರಡು ವಾರಗಳಲ್ಲಿ ಸ್ಥಿತಿಗತಿ ವರದಿ ಸಲ್ಲಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಕೋವಿಡ್ನಿಂದ ಮರಣ ಹೊಂದಿದ ಪೋಷಕರಿಗೆ ಸೇರಿದ ಆಸ್ತಿಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಅದನ್ನು 'ಬಾಲ ಸ್ವರಾಜ್' ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲು ಕ್ರಮ ತೆಗೆದುಕೊಳ್ಳುವಂತೆ ಪೀಠ ಅಧಿಕಾರಿಗಳಿಗೆ ಸೂಚಿಸಿದೆ. ಅಂತಹ ಆಸ್ತಿಗಳನ್ನು ರಕ್ಷಿಸಲು ಜಿಲ್ಲಾಧಿಕಾರಿಗಳಿಗೆ (ಡಿಎಂ) ತಿಳಿಸಿದೆ.