ಕರ್ನಾಟಕ

karnataka

ETV Bharat / bharat

ಶೀಘ್ರದಲ್ಲೇ ನ್ಯಾಯಾಲಯಗಳಲ್ಲಿ ನಡೆಯುವ ವಿಚಾರಣೆಗಳ ನೇರಪ್ರಸಾರ: ನ್ಯಾ. ಎನ್​.ವಿ. ರಮಣ - Gujarat High Court

ನ್ಯಾಯಾಂಗವು ಜನರಿಗೆ ಮತ್ತಷ್ಟು ಹತ್ತಿರವಾಗಲು ಹೊಸ ನಿಯಮವನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ನ್ಯಾಯಾಲಯಗಳಲ್ಲಿ ನಡೆಯುವ ವಿಚಾರಣೆಯನ್ನು ನೇರಪ್ರಸಾರ ಮಾಡಲು ನಿರ್ಧರಿಸಿರುವುದಾಗಿ ಮುಖ್ಯನ್ಯಾಯಮೂರ್ತಿ ಎನ್​.ವಿ.ರಮಣ ತಿಳಿಸಿದ್ದಾರೆ.

ಎನ್.ವಿ ರಮಣ
ಎನ್.ವಿ ರಮಣ

By

Published : Jul 18, 2021, 12:10 PM IST

ಅಹಮದಾಬಾದ್: ನ್ಯಾಯಾಲಯದಲ್ಲಿ ನಡೆಯುವ ವಿಚಾರಣೆಯನ್ನು ನೇರಪ್ರಸಾರ ಮಾಡುವುದರಿಂದ ನ್ಯಾಯ ವಿತರಣಾ ವ್ಯವಸ್ಥೆಯ ಬಗೆಗಿನ ತಪ್ಪು ಕಲ್ಪನೆಗಳು ದೂರವಾಗುತ್ತವೆ. ಸುಪ್ರೀಂಕೋರ್ಟ್ ತನ್ನ ಕೆಲವು ನ್ಯಾಯಾಲಯಗಳಿಂದ ವಿಚಾರಣೆಯ ನೇರಪ್ರಸಾರ ಮಾಡಲು ಉತ್ಸುಕವಾಗಿದೆ ಎಂದು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಶನಿವಾರ ಹೇಳಿದ್ದಾರೆ.

ಗುಜರಾತ್ ಹೈಕೋರ್ಟ್​​​ನ ವಿಚಾರಣೆಯ ನೇರ ಪ್ರಸಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್​​ನಲ್ಲಿ ನಡೆಯುವ ವಿಚಾರಣೆಗಳನ್ನು ಶೀಘ್ರದಲ್ಲೇ ನೇರ ಪ್ರಸಾರ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಈಗಾಗಲೇ ಸಿದ್ಧತೆಗಳು ನಡೆದಿವೆ. ವಿವಿಧ ನ್ಯಾಯಾಲಯಗಳ ವಿಚಾರಣೆಯನ್ನು ನೇರಪ್ರಸಾರ ಮಾಡಲು ಸುಪ್ರೀಂಕೋರ್ಟ್ ಚಿಂತನೆ ನಡೆಸಿದೆ ಎಂದರು.

ಸದ್ಯ ನ್ಯಾಯಾಲಯಗಳ ಚಟುವಟಿಕೆಗಳ ಮಾಹಿತಿಯನ್ನು ಜನರು ಮಾಧ್ಯಮಗಳ ಮೂಲಕ ಪಡೆಯುತ್ತಿದ್ದಾರೆ. ಆದರೆ, ಮಾಧ್ಯಮಗಳಿಂದ ಕೆಲವು ಬಾರಿ ಅರೆಬರೆ ಅಥವಾ ತಪ್ಪು ಮಾಹಿತಿ ಪ್ರಕಟವಾಗುತ್ತದೆ. ಈ ಮೂಲಕ ನ್ಯಾಯಾಲಯಗಳನ್ನು ಇಕ್ಕಟ್ಟಿಗೆ ಸಿಲುಕಿಸುವ ಯತ್ನಗಳೂ ನಡೆಯುತ್ತವೆ ಎಂದು ಮುಖ್ಯನ್ಯಾಯಮೂರ್ತಿ ಆತಂಕ ವ್ಯಕ್ತಪಡಿಸಿದರು.

ಆದರೆ ಕೋರ್ಟ್ ಕಲಾಪಗಳನ್ನು ನೇರ ಪ್ರಸಾರ ಮಾಡುವುದರಿಂದ ಇಂತಹ ಯಾವುದೇ ಗೊಂದಲಗಳಿರುವುದಿಲ್ಲ. ಜನರು ಸ್ಪಷ್ಟವಾದ ಮಾಹಿತಿಯನ್ನು ಪಡೆಯಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಕರ್ನಾಟಕ ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಿರು ಪರಿಚಯ

ಸಂವಿಧಾನದಡಿಯಲ್ಲಿ ನೀಡಲಾಗಿರುವ ಹಕ್ಕಿನಂತೆ ಜನರು ನ್ಯಾಯಾಲಯದ ಕಲಾಪಗಳನ್ನು ವೀಕ್ಷಿಸಬಹುದು. ಹಾಗಾಗಿ ಆಧುನಿಕ ತಂತ್ರಜ್ಞಾನಗಳ ಸಹಾಯದಿಂದ ನೇರಪ್ರಸಾರ ಮಾಡಲಾಗುವುದು ಎಂದು ಸಿಜೆಐ ಮಾಹಿತಿ ನೀಡಿದರು.

ABOUT THE AUTHOR

...view details