ನವದೆಹಲಿ:ಕೊರೊನಾ ನಂತರದಲ್ಲಿ ಆರ್ಥಿಕತೆಗೆ ಪ್ರಚೋದನೆ ನೀಡುವ ಸಲುವಾಗಿ ಬಜೆಟ್ ಅನ್ನು ಮಂಡಿಸಲಾಗಿದೆ. ಸರಿಯಾದ ಸಮಯದಲ್ಲಿ ಸರಿಯಾದ ದಿಕ್ಕಿನಲ್ಲಿ ನಾವು ಖರ್ಚು ಮಾಡಲಾಗುತ್ತದೆ. ಬಜೆಟ್ ಮೂಲಕ ಅಗತ್ಯ ಬೇಡಿಕೆ ಈಡೇರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
2021ರ ಕೇಂದ್ರ ಹಣಕಾಸು ಬಜೆಟ್ ಮಂಡನೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈಗ ಮಂಡನೆ ಮಾಡಿರುವ ಬಜೆಟ್ನಲ್ಲಿ ಎರಡು ಲಕ್ಷಣಗಳಿವೆ. ರಸ್ತೆಗಳ ನಿರ್ಮಾಣ, ವಿದ್ಯುತ್ ಉತ್ಪಾದನೆ, ಬಂದರು ಮತ್ತು ಸೇತುವೆಗಳ ನಿರ್ಮಾಣ ಮಾತ್ರವಲ್ಲದೇ ಮುಂತಾದ ಮೂಲಸೌಕರ್ಯಗಳ ಅಭಿವೃದ್ಧಿಗೆ ಅತಿ ದೊಡ್ಡಮಟ್ಟದ ಖರ್ಚು ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.
ಇದಾದ ನಂತರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒಲವು ತೋರಲಾಗಿದ್ದು, ಇಲ್ಲಿಯೂ ಆರೋಗ್ಯ ವಲಯದ ನಿರ್ವಹಣೆಗಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಜೆಟ್ನಲ್ಲಿ ಮೂಲಸೌಕರ್ಯ ಹೊರತುಪಡಿಸಿದರೆ ಹೆಚ್ಚು ಆರೋಗ್ಯ ಕ್ಷೇತ್ರಕ್ಕೆ ಅನುದಾನ ಮೀಸಲಿಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.