ಮುಂಬೈ:ಮಹಾರಾಷ್ಟ್ರದಲ್ಲಿ ನಿತ್ಯವೂ ಕೊರೊನಾ ಪೀಡಿತರ ಸಂಖ್ಯೆ ಏರಿಕೆ ಆಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಕಟ್ಟುನಿಟ್ಟಿನ ಕೋವಿಡ್ ನಿಯಮಗಳನ್ನು ಜಾರಿಗೊಳಿಸಿದೆ. ಒಂದೊಮ್ಮೆ ಈ ನಿಯಮಗಳನ್ನ ರಾಜ್ಯದ ಜನತೆ ಅನುಸರಣೆ ಮಾಡದಿದ್ದರೆ ಮುಂದಿನ 8 ದಿನಗಳಲ್ಲಿ ಲಾಕ್ಡೌನ್ ಜಾರಿ ಮಾಡುವುದು ಅನಿವಾರ್ಯ ಎಂದು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಹೇಳಿದ್ದಾರೆ.
ಈ ಸಂಬಂಧ ವಿಡಿಯೋ ಮೂಲಕ ರಾಜ್ಯವನ್ನು ಉದ್ದೇಶಿಸಿ ಮಾತನಾಡಿರುವ ಅವರು, ನಿಮಗೆ ಲಾಕ್ಡೌನ್ ಬೇಕಾ ಎಂದು ಪ್ರಶ್ನಿಸಿರುವ ಅವರು, ಈ ಸಂಬಂಧ ಇನ್ನು ಎಂಟು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇಂದು ಮಹಾರಾಷ್ಟ್ರದಲ್ಲಿ 7 ಸಾವಿರ ಕೋವಿಡ್ ಕೇಸ್ಗಳು ದಾಖಲಾಗಿವೆ. ಇದು ಹೀಗೆ ಮುಂದುವರಿದರೆ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನ ಕೈಗೊಳ್ಳಬೇಕಾಗುತ್ತದೆ. ಹಾಗಾಗಿ ಯಾರ್ಯಾರು ಮಾಸ್ಕ್ ಹಾಕದೇ, ದೂರವನ್ನ ಅಲಕ್ಷಿಸುತ್ತಿದ್ದೀರೋ ಅವರೆಲ್ಲ ನಿಯಮಗಳನ್ನ ಅನುಸರಿಸಿ ಎಂದು ಮನವಿ ಮಾಡಿದ್ದಾರೆ.