ಕರ್ನಾಟಕ

karnataka

By

Published : May 13, 2021, 2:33 PM IST

ETV Bharat / bharat

ಮಹಾರಾಷ್ಟ್ರದಲ್ಲಿ ಜೂ.1ರವರೆಗೆ ಲಾಕ್​ಡೌನ್ ವಿಸ್ತರಿಸಿ ಆದೇಶ

ಕೊರೊನಾ ಪ್ರಕರಣ ಮತ್ತಷ್ಟು ನಿಯಂತ್ರಿಸುವ ಸಲುವಾಗಿ ಮಹಾರಾಷ್ಟ್ರ ಸರ್ಕಾರವು ಲಾಕ್‌ಡೌನ್‌ ನಿರ್ಬಂಧಗಳನ್ನು ಜೂನ್‌ 1ರವರೆಗೆ ವಿಸ್ತರಿಸಿದೆ. ಏಪ್ರಿಲ್‌ 5ರಂದು ಲಾಕ್‌ಡೌನ್‌ ನಿರ್ಬಂಧಗಳನ್ನು ಜಾರಿಗೊಳಿಸಲಾಗಿತ್ತು.

Lockdown-like restrictions extended in Maharashtra till June 1
Lockdown-like restrictions extended in Maharashtra till June 1

ಮುಂಬೈ: ಕೊರೊನಾ ನಿಯಂತ್ರಿಸುವ ಸಲುವಾಗಿ ಮಹಾರಾಷ್ಟ್ರ ಸರ್ಕಾರವು ಲಾಕ್‌ಡೌನ್‌ ನಿರ್ಬಂಧಗಳನ್ನು ಜೂನ್‌ 1ರವರೆಗೆ ವಿಸ್ತರಿಸಿದೆ.

ಲಾಕ್​ಡೌನ್ ವಿಸ್ತರಿಸಿ ಆದೇಶ

ರಾಜ್ಯದ ಮುಖ್ಯ ಕಾರ್ಯದರ್ಶಿ ಸೀತಾರಾಂ ಕುಂಟೆ ಅವರು ಆದೇಶ ಹೊರಡಿಸಿದ್ದು, ಜೂನ್‌ 1ರ ಬೆಳಗ್ಗೆ 7 ಗಂಟೆಯವರೆಗೆ ನಿರ್ಬಂಧಗಳು ಜಾರಿಯಲ್ಲಿರಲಿವೆ ಎಂದು ಹೇಳಿದ್ದಾರೆ.

ಲಾಕ್​ಡೌನ್ ವಿಸ್ತರಿಸಿ ಆದೇಶ

ರಾಜ್ಯದೊಳಗೆ ಯಾವುದೇ ವಿಧದ ಸಾರಿಗೆಯ ಮೂಲಕ ಬಂದರೂ ಆರ್‌ಟಿ – ಪಿಸಿಆರ್‌ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ. 48 ಗಂಟೆಗಳ ಒಳಗೆ ಇಂತಹ ವರದಿ ಪಡೆದಿರಬೇಕು. ಸರಕು ಸಾಗಣೆ ವಾಹನಗಳಲ್ಲಿ ಇಬ್ಬರಗಿಂತ ಹೆಚ್ಚು ಮಂದಿ ಪ್ರಯಾಣಿಸುವಂತಿಲ್ಲ. ಈ ವಾಹನಗಳಲ್ಲಿ ಇದ್ದವರೂ ನೆಗೆಟಿವ್‌ ವರದಿ ಪಡೆದಿರುವುದು ಕಡ್ಡಾಯವಾಗಿದ್ದು, 7 ದಿನ ರಾಜ್ಯದೊಳಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಲಾಕ್​ಡೌನ್ ವಿಸ್ತರಿಸಿ ಆದೇಶ

ಮಹಾರಾಷ್ಟ್ರದಲ್ಲಿ ಏಪ್ರಿಲ್‌ 5ರಂದು ಲಾಕ್‌ಡೌನ್‌ ನಿರ್ಬಂಧಗಳನ್ನು ಜಾರಿಗೊಳಿಸಲಾಗಿತ್ತು. ಇದೀಗ ಮತ್ತೆ ಕೊರೊನಾ ನಿಯಂತ್ರಿಸುವ ಸಲುವಾಗಿ ಮತ್ತಷ್ಟು ದಿನ ವಿಸ್ತರಿಸಲಾಗಿದೆ.

ABOUT THE AUTHOR

...view details