ಕರ್ನಾಟಕ

karnataka

ETV Bharat / bharat

ಮಣಿಪುರ ಹಿಂಸಾಚಾರ ವಿಚಾರ: ಪ್ರತಿಪಕ್ಷಗಳ ಗದ್ದಲದ ನಡುವೆಯೇ ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ - ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ

Manipur violence issue: ಸದನದಲ್ಲಿ ಮಣಿಪುರ ಹಿಂಸಾಚಾರ ವಿಚಾರದ ಕುರಿತು ಪ್ರತಿಪಕ್ಷಗಳ ಅಬ್ಬರದ ಘೋಷಣೆಗಳ ನಡುವೆಯೇ ಲೋಕಸಭೆ ಕಲಾಪವನ್ನು ನಾಳೆಗೆ ಮುಂದೂಡಿಕೆ ಮಾಡಲಾಯಿತು.

Lok Sabha
ಮಣಿಪುರ ಹಿಂಸಾಚಾರ ವಿಚಾರ: ಪ್ರತಿಪಕ್ಷಗಳ ಗದ್ದಲದ ನಡುವೆಯೇ ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ

By

Published : Jul 24, 2023, 3:45 PM IST

Updated : Jul 24, 2023, 5:40 PM IST

ನವದೆಹಲಿ: ಸದನದಲ್ಲಿ ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸಂಸದರ ಘೋಷಣೆಗಳ ನಡುವೆಯೇ ಲೋಕಸಭೆ ಕಲಾಪವನ್ನು ನಾಳೆಗೆ ಮುಂದೂಡಲಾಯಿತು. ''ಮಣಿಪುರ ಹಿಂಸಾಚಾರದ ಕುರಿತು ಸದನದಲ್ಲಿ ಚರ್ಚೆಗೆ ಸಿದ್ಧ. ಈ ವಿಷಯದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ನಾನು ಪ್ರತಿಪಕ್ಷಗಳಿಗೆ ಮನವಿ ಮಾಡುತ್ತೇನೆ. ಈ ಸೂಕ್ಷ್ಮ ವಿಷಯದ ಬಗ್ಗೆ ದೇಶವು ಸತ್ಯವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಿದೆ'' ಎಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಉಭಯ ಸದನಗಳಲ್ಲಿ ಮಣಿಪುರ ಹಿಂಸಾಚಾರದ ಪ್ರತಿಧ್ವನಿ: ಉಭಯ ಸದನಗಳಲ್ಲಿ ಮಣಿಪುರ ಹಿಂಸಾಚಾರ ವಿಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಬೇಕು ಹಾಗೂ ಪ್ರಧಾನಿಗಳು ಸದನಕ್ಕೆ ಬರಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳು ಇಂದು ಸೋಮವಾರ ಪ್ರತಿಭಟನೆ ನಡೆಸಿದವು. ಆಗ ರಾಜ್ಯಸಭಾಧ್ಯಕ್ಷರು ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಲಾಗಿತ್ತು.

ಇದಕ್ಕೂ ಮೊದಲು ಉಭಯ ಸದನಗಳ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷಗಳು ಮಣಿಪುರ ಹಿಂಸಾಚಾರ ವಿಷಯದ ಬಗ್ಗೆ ಚರ್ಚೆ ನಡೆಸುವಂತೆ ಪಟ್ಟಹಿಡಿದವು. ರಾಜ್ಯಸಭಾಧ್ಯಕ್ಷ ಜಗದೀಪ್​ ಧನ್​ಕರ್ ಅವರು ಈ ಸಂಬಂಧ ನಿಯಮ 267ರ ಪ್ರಕಾದ 27 ನೋಟಿಸ್​ಗಳನ್ನು ಪಡೆದಿರುವುದಾಗಿ ತಿಳಿಸಿದರು.

ಟಿಎಂಸಿ ನಾಯಕ ಡೆರೆಕ್​ ಓಬ್ರೈನ್ ಹಿಂಸಾಚಾರದ ಕುರಿತು ಪ್ರಸ್ತಾಪಿಸಿದ ವೇಳೆ, ಈ ಬಗ್ಗೆ ಎಚ್ಚರಿಕೆ ನೀಡಿ ಕಲಾಪ ಮುಂದೂಡಿಕೆ ಮಾಡಿದರು. ಇನ್ನು ಲೋಕಸಭೆಯಲ್ಲೂ ಪ್ರತಿಪಕ್ಷಗಳು ಮಣಿಪುರ ಹಿಂಸಾಚಾರದ ಕುರಿತು ಚರ್ಚೆ ನಡೆಸುವಂತೆ ಪಟ್ಟು ಹಿಡಿದರು. ಆಗ ಕಲಾಪವನ್ನು 2 ಗಂಟೆವರೆಗೆ ಮುಂದೂಡಲಾಯಿತು.

ಸಂಸದ ಸಂಜಯ್​ ಸಿಂಗ್​ ​ಅಮಾನತು:ಆಪ್​ ಸಂಸದ ಸಂಜಯ್​ ಸಿಂಗ್​ ​ ಅವರನ್ನು ಮುಂಗಾರು ಅಧಿವೇಶನ ಮುಗಿಯುವವರಿಗೆ ಅಮಾನತುಗೊಳಿಸಲಾಗಿದೆ. ರಾಜ್ಯಸಭೆಯ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಸಿಂಗ್​ ವಿರುದ್ಧ ಕ್ರಮವಹಿಸಲಾಗಿದೆ. ಸಭಾ ನಾಯಕ ಪಿಯೂಷ್​ ಗೋಯಲ್​ ಅವರು ಅಮಾನತು ಮಾಡಿರುವ ಕುರಿತು ಮಂಡಿಸಿದ ಪ್ರಸ್ತಾಪವನ್ನು ಅಂಗೀಕರಿಸಲಾಯಿತು. ಇದಕ್ಕೂ ಮೊದಲು ರಾಜ್ಯಸಭಾ ಅಧ್ಯಕ್ಷ ಜಗದೀಪ್​ ಧನ್​ಕರ್​, ​ಸಿಂಗ್​ ​ಅವರ ಅಶಿಸ್ತಿನ ವರ್ತನೆ ಕುರಿತು ಎಚ್ಚರಿಕೆ ಕೊಟ್ಟಿದ್ದರು.

ಪ್ರಧಾನಿ ಮೋದಿ ಸಂಸತ್ತಿಗೆ ಜವಾಬ್ದಾರರು - ಶಶಿ ತರೂರ್:ಸಂಸತ್ತಿನಲ್ಲಿ ಮಣಿಪುರ ವಿಷಯದ ಕುರಿತು ಪ್ರಧಾನಿ ಹೇಳಿಕೆಗೆ ವಿರೋಧ ಪಕ್ಷಗಳ ಬೇಡಿಕೆ ಕುರಿತು ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರತಿಕ್ರಿಯಿಸಿ, 'ಪ್ರಧಾನಿ ನರೇಂದ್ರ ಮೋದಿ ಸಂಸತ್ತಿಗೆ ಜವಾಬ್ದಾರರು. ಪ್ರಧಾನಿ ಸಂಸತ್ತಿಗೆ ಉತ್ತರಿಸಬೇಕು. ಆದ್ರೆ, ದೇಶದಲ್ಲಿ ಸಂಸದೀಯ ಪ್ರಜಾಪ್ರಭುತ್ವವಿಲ್ಲ. ಸಂಸತ್ತಿಗೆ ಪ್ರಧಾನಿಯನ್ನು ಭೇಟಿ ಮಾಡಲು, ಪ್ರಶ್ನಿಸಲು ಅವಕಾಶವೇ ಇಲ್ಲದಂತಾಗಿದೆ ಎಂದು ಕಿಡಿಕಾರಿದರು.

ಭೀಕರ ಪರಿಸ್ಥಿತಿ ಎದುರಿಸುತ್ತಿರುವ ಮಣಿಪುರ:ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಮಾತನಾಡಿ, ''ಕಾನೂನು ತನ್ನ ಕ್ರಮವನ್ನು ತೆಗೆದುಕೊಳ್ಳಬೇಕು. ಆದರೆ, ಮಣಿಪುರದಲ್ಲಿ ಏನಾಗುತ್ತಿದೆ ಮತ್ತು ದೇಶದ ಇತರ ಭಾಗಗಳಲ್ಲಿ ಏನಾಗಿದೆ ಎಂಬುದರ ನಡುವೆ ವ್ಯತ್ಯಾಸವಿದೆ'' ಎಂದು ಗರಂ ಆದರು. ಕಳೆದ 77ರಿಂದ 78 ದಿನಗಳಿಂದ ನಿರಂತರವಾಗಿ ಹಿಂಸಾಚಾರ ನಡೆಯುತ್ತಿದೆ. ಮಣಿಪುರ ರಾಜ್ಯವು ಬಹುತೇಕ ಕುಸಿದು ಹೋಗಿದೆ. ರಾಜ್ಯದಲ್ಲಿ ಸಂಪೂರ್ಣ ಜಾತಿ ವಿಭಜನೆಯಾಗಿದೆ. ಆದ್ದರಿಂದ ಮಣಿಪುರ ಅತ್ಯಂತ ಭೀಕರ ಪರಿಸ್ಥಿತಿ ಎದುರಿಸುತ್ತಿದೆ'' ಎಂದು ಹೇಳಿದರು.

ಇದನ್ನೂ ಓದಿ:ಮಣಿಪುರ ಹಿಂಸಾಚಾರ ಕುರಿತು ಪ್ರಧಾನಿ ಮೋದಿ ಹೇಳಿಕೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಪ್ರತಿಭಟನೆ - VIDEO

Last Updated : Jul 24, 2023, 5:40 PM IST

ABOUT THE AUTHOR

...view details