ನವದೆಹಲಿ:ಪೆಗಾಸಸ್ ಗೂಢಚರ್ಯೆ, ಕೃಷಿ ಕಾನೂನುಗಳ ರದ್ದತಿ ಹಾಗು ತೈಲ ಬೆಲೆ ಏರಿಕೆ ಮತ್ತಿತರ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಪಟ್ಟು ಸಡಿಲಿಸದ ಕಾರಣ ನಿಗದಿಗಿಂತಲೂ 2 ದಿನಗಳ ಮೊದಲೇ ಲೋಕಸಭಾ ಕಲಾಪವನ್ನು ಮುಂದೂಡಲಾಯಿತು.
ಇಂದು ಸದನ ಸೇರುತ್ತಿದ್ದಂತೆ ಇತ್ತೀಚೆಗೆ ನಿಧನರಾದ ನಾಲ್ವರು ಮಾಜಿ ಲೋಕಸಭಾ ಸದಸ್ಯರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಸದನದಲ್ಲಿ ಹಾಜರಿದ್ದ ಸದಸ್ಯರು ಕೆಲವು ನಿಮಿಷಗಳ ಕಾಲ ಮೌನಾಚರಣೆ ಮಾಡಿದರು.