ನವದೆಹಲಿ:ಟೋಕಿಯೋ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧುಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಗಿದೆ.
ಲೋಕಸಭೆ ಕಲಾಪ ಆರಂಭಕ್ಕೂ ಮುನ್ನ ಮಾತನಾಡಿದ ಸ್ಪೀಕರ್ ಓಂ ಬಿರ್ಲಾ, ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ತಮ್ಮ ಅದ್ಭುತ ಪ್ರದರ್ಶನದಿಂದಾಗಿ ಒಲಿಂಪಿಕ್ಸ್ನಲ್ಲಿ ಈವರೆಗೆ ಎರಡು ಪದಕ ಗೆದ್ದಿದ್ದು ಸದನದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಆಕೆಯ ಸಾಧನೆ ಈ ದೇಶದ ಯುವಜನತೆಗೆ ಸ್ಫೂರ್ತಿಯಾಗಲಿ ಎಂದು ಹಾರೈಸಿದರು.