ಕರ್ನಾಟಕ

karnataka

ETV Bharat / bharat

ಆಕಾಂಕ್ಷಾ ದುಬೆ ಆತ್ಮಹತ್ಯೆ ಪ್ರಕರಣ: ಗಾಯಕ ಸಮರ್ ಸಿಂಗ್ ವಿರುದ್ಧ ಲುಕ್ ಔಟ್ ನೋಟಿಸ್..! - ಭೋಜ್‌ಪುರಿ ನಟಿ ಆತ್ಮಹತ್ಯೆ ಪ್ರಕರಣ

ಭೋಜ್‌ಪುರಿ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಕ ಸಮರ್ ಸಿಂಗ್ ಸೇರಿದಂತೆ ಇಬ್ಬರು ಆರೋಪಿಗಳಿಗೆ ಲುಕ್‌ಔಟ್ ನೋಟಿಸ್ ಜಾರಿಗೊಳಿಸಲಾಗಿದೆ.

Akanksha Dubey suicide case
ಆಕಾಂಕ್ಷಾ ದುಬೆ ಆತ್ಮಹತ್ಯೆ ಪ್ರಕರಣ

By

Published : Apr 6, 2023, 3:49 PM IST

ವಾರಾಣಸಿ (ಉತ್ತರ ಪ್ರದೇಶ):ಜನಪ್ರಿಯ ಭೋಜ್‌ಪುರಿ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಕ ಸಮರ್ ಸಿಂಗ್ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಇಬ್ಬರು ಆರೋಪಿಗಳಾದ ಸಮರ್ ಸಿಂಗ್ ಮತ್ತು ಸಂಜಯ್ ಸಿಂಗ್ ದೇಶ ಬಿಟ್ಟು ಹೊರಗೆ ಹೋಗುವಂತಿಲ್ಲ. ಈ ಸೂಚನೆಯನ್ನು ದೇಶದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ ಎಂದು ವಾರಾಣಸಿಯ ಸಾರನಾಥ್ ಪೊಲೀಸ್ ಠಾಣೆಯ ಅಧಿಕಾರಿ ಧರ್ಮಪಾಲ್ ಸಿಂಗ್ ತಿಳಿಸಿದ್ದಾರೆ.

ಏನಿದು ಪ್ರಕರಣ?:ಮಾರ್ಚ್ 25 ರಂದು, ಭೋಜ್‌ಪುರಿ ನಟಿ ಆಕಾಂಕ್ಷಾ ದುಬೆ ಅವರ ಮೃತ ದೇಹವು ವಾರಾಣಸಿಯ ಸಾರನಾಥ್ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಹೋಟೆಲ್ ನವರು ಮಾಸ್ಟರ್ ಕೀಯಿಂದ ಹೋಟೆಲ್ ರೂಂ ತೆರೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಇದನ್ನು ಆತ್ಮಹತ್ಯೆ ಎಂದು ಪರಿಗಣಿಸಿದ್ದಾರೆ. ಆದರೆ, ಎರಡು ದಿನಗಳ ನಂತರ ಈ ವಿಚಾರದಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದೆ. ಆಕಾಂಕ್ಷಾ ದುಬೆ ಅವರ ತಾಯಿ ಮಧು ದುಬೆ ಅವರು ಭೋಜ್‌ಪುರಿ ಗಾಯಕ ಸಮರ್ ಸಿಂಗ್ ಮತ್ತು ಆತನ ಸಹೋದರ ಸಂಜಯ್ ಸಿಂಗ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ದೂರಿದ್ದಾರೆ. ಮತ್ತು ಅವರಿಬ್ಬರು ನನ್ನ ಮಗಳನ್ನು ಕೊಂದಿದ್ದಾರೆ ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ.

ಸಿಬಿಐ ಅಥವಾ ಸಿಬಿ-ಸಿಐಡಿಯಿಂದ ತನಿಖೆಗೆ ಒತ್ತಾಯ:ನಟಿಯ ತಾಯಿ ಮಧು ದುಬೆ ಪರವಾಗಿ ವಕೀಲ ಶಶಕ್ ಶೇಖರ್ ತ್ರಿಪಾಠಿ ಧ್ವನಿ ಎತ್ತಿದ್ದಾರೆ. ನಟಿ ಶವದ ಮರಣೋತ್ತರ ಪರೀಕ್ಷೆಯ ವರದಿ ಮತ್ತು ವೈದ್ಯಕೀಯ ತಜ್ಞರ ಸಲಹೆ ಪಡೆಯಲಾಗುವುದು. ಹಾಗೂ ಅದರ ಆಧಾರದ ಮೇಲೆ ಪೊಲೀಸರನ್ನು ಪ್ರಶ್ನೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಸಿಬಿಐ ಅಥವಾ ಸಿಬಿ - ಸಿಐಡಿಯಿಂದ ಈ ಪ್ರಕರಣದ ತನಿಖೆ ನಡೆಸುವಂತೆ ತ್ರಿಪಾಠಿ ಅವರು ಬುಧವಾರ ಒತ್ತಾಯಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿರುವ ಅವರು, 25 ವರ್ಷದ ನಟಿಯ ಸಾವು ಆತ್ಮಹತ್ಯೆಯಲ್ಲ. ಬದಲಿಗೆ ಹೋಟೆಲ್ ಕೋಣೆಯಲ್ಲಿ ಕೆಲವರು ಅವಳನ್ನು ಹತ್ಯೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಸಮರ್ ಸಿಂಗ್ ಬಂಧಿಸುವ ಕಾರ್ಯ ಚುರುಕು: ಆಕಾಂಕ್ಷಾ ದುಬೆ ಅವರ ಮೊಬೈಲ್ ಫೋನ್‌ನಿಂದಲೂ ಮಾಹಿತಿ ಹೊರತೆಗೆಯಲಾಗುತ್ತಿದ್ದು, ಇದು ಒಂದೆರೆಡು ದಿನಗಳಲ್ಲಿ ಪೊಲೀಸರಿಗೆ ತಲುಪಲಿದೆ. ಎಲ್ಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಬಳಿಕ ಸಮರ್ ಸಿಂಗ್ ಬಂಧಿಸುವ ಕಾರ್ಯ ಚುರುಕುಗೊಂಡಿದೆ. ಶೀಘ್ರದಲ್ಲೇ ಸಮರ್ ಸಿಂಗ್ ಪೊಲೀಸ್ ಕಸ್ಟಡಿಗೆ ಸಿಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅದೇ ಸಮಯದಲ್ಲಿ, ಆಕಾಂಕ್ಷಾ ದುಬೆ ಪರ ವಕೀಲ ಶಶಾಂಕ್ ಶೇಖರ್ ತ್ರಿಪಾಠಿ ಕೂಡ ಲುಕ್ ಔಟ್ ನೋಟಿಸ್ ಜಾರಿ ಮಾಡಿರುವುದನ್ನು ಖಚಿತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಸಮರ್ ಸಿಂಗ್ ಅವರ ಮೇಲೆ ಶೀಘ್ರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಪ್ರಯತ್ನಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ಕೆನಾಡದಿಂದ ಬಂದ ಯುವತಿಯನ್ನು ಗುಂಡಿಕ್ಕಿ ಕೊಂದು ಹೊಲದಲ್ಲಿ ಹೂತಿಟ್ಟ ಪ್ರಿಯಕರ!

ABOUT THE AUTHOR

...view details