ಗುಂಟೂರು(ಆಂಧ್ರಪ್ರದೇಶ):ನಿಯಂತ್ರಣ ಕಳೆದುಕೊಂಡ ಟ್ರಕ್ವೊಂದು ರಸ್ತೆ ಬದಿಯ ಗುಡಿಸಲಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಉಳಿದಂತೆ ಇಬ್ಬರು ಗಾಯಗೊಂಡಿದ್ದಾರೆ.
ರಸ್ತೆ ಬದಿ ಗುಡಿಸಲಿಗೆ ಡಿಕ್ಕಿ ಹೊಡೆದ ಲಾರಿ... ಒಂದೇ ಕುಟುಂಬದ ನಾಲ್ವರು ಸಾವು
ನಿಯಂತ್ರಣ ಕಳೆದುಕೊಂಡ ಲಾರಿವೊಂದು ರಸ್ತೆ ಪಕ್ಕದ ಗುಡಿಸಲಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.
ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಕೊಟ್ಟಪಾಲಂನಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳನ್ನ ಈಗಾಗಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರನ್ನ ಬಾಲಕೋಟಯ್ಯ, ಪತ್ನಿ ಮಸ್ತಾನಮ್ಮ, ಮಗ ಹರೀಶ್ ಮತ್ತು ಮಗಳು ಎಂದು ಗುರುತಿಸಲಾಗಿದೆ. ಉಳಿದಂತೆ ವೆಂಕಟರಮಣಮ್ಮ ಹಾಗೂ ಬಾಲಕೋಟಯ್ಯನ ಮೊಮ್ಮಗಳು ಗಾಯಗೊಂಡಿದ್ದಾರೆ.
ಘಟನೆಯಿಂದ ಲಾರಿ ಚಾಲಕ ವೆಂಕಟೇಶ್ವಲು ಸ್ಟೇರಿಂಗ್ ವೀಲ್ ಮತ್ತು ಸೀಟಿನ ನಡುವೆ ಸಿಲುಕಿಕೊಂಡಿದ್ದರು. ಜೆಸಿಬಿ ಸಹಾಯದಿಂದ ಅವರನ್ನ ಹೊರತೆಗೆದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಸಂಚಾರಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಂಡರು. ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.