ಕರ್ನಾಟಕ

karnataka

ETV Bharat / bharat

ಪ್ರೀತಿಸಿ ವಿವಾಹವಾದ ತಮಿಳುನಾಡು ಸಚಿವರ ಪುತ್ರಿ: ರಕ್ಷಣೆ ಕೋರಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ - ಪ್ರೀತಿಸಿ ವಿವಾಹವಾದ ತಮಿಳುನಾಡು ಸಚಿವರ ಪುತ್ರಿ

ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರ ಬಲಗೈ ಬಂಟ ಎಂದೇ ಹೇಳಲಾಗುತ್ತಿರುವ ಸಚಿವ ಶೇಖರ್ ಬಾಬು‌ ಅವರ ಪುತ್ರಿ ಜಯಕಲ್ಯಾಣಿ ಹಾಗೂ ಪತಿ ಸತೀಶ್ ಕುಮಾರ್ ದಂಪತಿ ಪೊಲೀಸರಿಗೆ ರಕ್ಷಣೆ ಕೋರಿ ಮನವಿ ಪತ್ರ ಸಲ್ಲಿಸಿದ್ದಾರೆ.

ಪ್ರೀತಿಸಿ ವಿವಾಹವಾದ ತಮಿಳುನಾಡು ಸಚಿವರ ಪುತ್ರಿ
ಪ್ರೀತಿಸಿ ವಿವಾಹವಾದ ತಮಿಳುನಾಡು ಸಚಿವರ ಪುತ್ರಿ

By

Published : Mar 7, 2022, 5:07 PM IST

Updated : Mar 7, 2022, 5:31 PM IST

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದಕ್ಕೆ ನಮ್ಮ ತಂದೆ ವಿರೋಧಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಮಿಳುನಾಡಿನ ಮುಜರಾಯಿ ಖಾತೆ ಸಚಿವ ಶೇಖರ್ ಬಾಬು‌ ಅವರ ಪುತ್ರಿ ಗಂಭೀರ ಆರೋಪ ಮಾಡಿದ್ದು, ನಗರ ಪೊಲೀಸ್ ಆಯುಕ್ತರ‌ ಕಚೇರಿಗೆ ಭೇಟಿ ನೀಡಿ ರಕ್ಷಣೆ ಕೋರಿ ಮನವಿ ಪತ್ರ ಸಲ್ಲಿಸಿದ್ದಾರೆ.

ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರ ಬಲಗೈ ಬಂಟ ಎಂದೇ ಹೇಳಲಾಗುತ್ತಿರುವ ಸಚಿವ ಶೇಖರ್ ಬಾಬು‌ ಪುತ್ರಿ ಜಯಕಲ್ಯಾಣಿ ಹಾಗೂ ಪತಿ ಸತೀಶ್ ಕುಮಾರ್ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಯಕಲ್ಯಾಣಿ, ಹಲವು ವರ್ಷಗಳಿಂದ ಸತೀಶ್ ಅವರನ್ನು ಪ್ರೀತಿಸುತ್ತಿದ್ದೇನೆ. ನಮ್ಮ ಪ್ರೀತಿಗೆ ನನ್ನ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ‌.‌ ಕೆಲ ತಿಂಗಳ ಹಿಂದೆ ಮದುವೆ ಮಾಡಿಕೊಳ್ಳಲು ಮುಂದಾದಾಗ ಸತೀಶ್‌ ಅವರನ್ನು ಅಕ್ರಮವಾಗಿ ಎರಡು ತಿಂಗಳ ಕಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದರ ಹಿಂದೆ ನಮ್ಮ ತಂದೆಯವರ ಕೈವಾಡವಿದೆ. ನಾನು ಮೇಜರ್ ಆಗಿದ್ದು ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದೇವೆ‌. ತಮಿಳುನಾಡಿಗೆ ಹೋದರೆ ನಮ್ಮನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಹೀಗಾಗಿ ನಮಗೆ ರಕ್ಷಣೆ ನೀಡಬೇಕೆಂದು ಕರ್ನಾಟಕ ಪೊಲೀಸರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.

ಪ್ರೀತಿಸಿ ವಿವಾಹವಾದ ತಮಿಳುನಾಡು ಸಚಿವರ ಪುತ್ರಿ

ಹಿಂದೂಪರ‌ ಮುಖಂಡ ಭರತ್ ಶೆಟ್ಟಿ ಮಾತನಾಡಿ, ಸಾಮಾಜಿಕ‌ ಜಾಲತಾಣಗಳಲ್ಲಿ ನಮ್ಮನ್ನು ಸಂಪರ್ಕಿಸಿದ ಪ್ರೇಮಿಗಳಿಗೆ ಹಿಂದೂ ಸಂಪ್ರದಾಯದಂತೆ‌ ಮದುವೆ ಮಾಡಿಸಲಾಗಿದೆ. ಯುವತಿ ಮನೆಯವರಿಂದ ಜೀವ ಬೆದರಿಕೆಯಿದೆ. ಹೀಗಾಗಿ ರಕ್ಷಣೆ ನೀಡಬೇಕೆಂದು ಎಂದು ನಗರ ಪೊಲೀಸ್ ಆಯುಕ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು.

Last Updated : Mar 7, 2022, 5:31 PM IST

For All Latest Updates

TAGGED:

ABOUT THE AUTHOR

...view details