ಕಾಸ್‌ಗಂಜ್ (ಉತ್ತರ ಪ್ರದೇಶ): ಜಿಲ್ಲೆಯಲ್ಲಿ ಬುಧವಾರ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಕೋತ್ವಾಲಿ ಪಟಿಯಾಲಿ ಪ್ರದೇಶದಲ್ಲಿ ಪ್ರೇಮಿಯೊಬ್ಬ ತನ್ನ ಪ್ರೇಯಸಿಯನ್ನೇ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿರುವ ಘಟನೆ ನಡಿದಿದೆ. ಇದರಿಂದ ಯುವತಿ ತೀವ್ರವಾಗಿ ಗಾಯಗೊಂಡಿದ್ದು, ನೋವಿನಿಂದ ಒದ್ದಾಡಿದ್ದಾಳೆ. ಯುವತಿಯ ಪರಿಸ್ಥಿತಿಯನ್ನು ಕಂಡ ಸಂಬಂಧಿಕರು ತರಾತುರಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಯುವತಿ ಸ್ಥಿತಿ ತೀರಾ ಚಿಂತಾಜನಕವಾಗಿದೆ. ಆರೋಪಿ ವಿರುದ್ಧ ಸಂಬಂಧಿಕರು ದೂರು ನೀಡಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಯುವತಿಯ ಸಂಬಂಧಿಕರು ಈ ಸಂಬಂಧ ನೀಡಿರುವ ದೂರಿನ ಆಧಾರದ ಮೇಲೆ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟಕ್ಕೆ ಮುಂದಾಗಿದ್ದಾರೆ.
ಇದನ್ನೂ ಓದಿ:12 ತುಂಡುಗಳಾಗಿ ಕತ್ತರಿಸಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ!
ಸಂತ್ರಸ್ತೆಯ ತಂದೆ ಹೇಳಿದ್ದೇನು?: ''ನೀರಜ್ ಎಂಬ ಯುವಕ ಇ-ರಿಕ್ಷಾ ಓಡಿಸುತ್ತಿದ್ದ. ತನ್ನ ಅಪ್ರಾಪ್ತ ಮಗಳಿಗೆ ಬಲವಂತವಾಗಿ ಮದುವೆ ಮಾಡುವಂತೆ ಒತ್ತಡ ಹೇರುತ್ತಿದ್ದ. ಪಾಗಲ್ ಪ್ರೇಮಿಯ ಕಾಟ ತಾಳಲಾರದೇ ಮಗಳ ಮದುವೆಯನ್ನು ಬೇರೆ ಕಡೆ ನಿಶ್ಚಯಿಸಿದ್ದೆವು. ಈ ವಿಚಾರ ತಿಳಿದು ಕೋಪಗೊಂಡ ಈ ಹುಚ್ಚು ಪ್ರೇಮಿ, ತಮ್ಮ ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ'' ಎಂದು ಸಂತ್ರಸ್ತೆಯ ತಂದೆ ದೂರಿನಲ್ಲಿ ವಿವರಣೆ ನೀಡಿದ್ದಾರೆ.
ಇದನ್ನೂ ಓದಿ:ಅಮೆರಿಕದ ಒಕ್ಲಹೋಮ್ನಲ್ಲಿ ಭಾರತೀಯ ಸಂಜಾತೆ ನಿಗೂಢ ಸಾವು: ತನಿಖೆ ಚುರುಕು