ಕರ್ನಾಟಕ

karnataka

ETV Bharat / bharat

ಪ್ರೇಮ ವಿವಾಹಕ್ಕೆ ಕುಟುಂಬದ ವಿರೋಧ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಲವರ್ಸ್​! - ರಾಜಸ್ಥಾನ ಹನುನಗಢ

ಪ್ರೀಮಿಗಳ ಮದುವೆಗೆ ಮನೆಯಲ್ಲಿ ವಿರೋಧ ವ್ಯಕ್ತಪಡಿಸಿದ್ದರಿಂದ ಆತ್ಮಹತ್ಯಗೆ ಯತ್ನಿಸಿರುವ ಘಟನೆ ನಡೆದಿದ್ದು, ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Lover Couple committed suicide
Lover Couple committed suicide

By

Published : Apr 24, 2021, 9:52 PM IST

Updated : Apr 24, 2021, 10:08 PM IST

ಹನುಮಗಢ(ರಾಜಸ್ಥಾನ): ಪರಸ್ಪರ ಪ್ರೀತಿಸುತ್ತಿದ್ದ ಲವರ್ಸ್ ವಿವಾಹಕ್ಕೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ರಾಜಸ್ಥಾನದ ಹನುಮಗಢದ ಪಿಲಿಬಂಗ ಪಟ್ಟಣದಲ್ಲಿ ವಾಸಿಸುತ್ತಿದ್ದ ಜೋಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಗಂಭೀರ ಸ್ಥಿತಿಯಲ್ಲಿರುವ ಅವರನ್ನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಜಿಲ್ಲಾಸ್ಪತ್ರೆ ಬಳಿ ಪ್ರೇಮಿಗಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಸಿಕ್ಕಿದ್ದಾರೆ.

ಪಿಲಿಬಂಗ ಪಟ್ಟಣದಿಂದ ಯುವತಿ ಕಾಣೆಯಾಗಿದ್ದಾಳೆಂದು ಹಲವು ದಿನಗಳ ಹಿಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಇದರ ಮಧ್ಯೆ ಯುವಕ-ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದನ್ನೂ ಓದಿ: Watch: ಪ್ರೆಶರ್ ಕುಕ್ಕರ್​ನಿಂದ ಹೊರ ಬರುವ​ ಉಗಿ ಸೇವಿಸುವ ಪೊಲೀಸರು... ಕಾರಣ!?

ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಇವರು ಮದುವೆ ಮಾಡಿಕೊಳ್ಳುವ ಉದ್ದೇಶ ಇಟ್ಟುಕೊಂಡಿದ್ದರು. ಆದರೆ ಇದಕ್ಕೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಆತ್ಮಹತ್ಯೆ ನಿರ್ಧಾರ ಮಾಡಿದ್ದಾರೆ. ಘಟನಾ ಸ್ಥಳದಿಂದ ಮೊಬೈಲ್​ ಫೋನ್ ಹಾಗೂ ಸೊಸೈಡ್​ ನೋಟ್​ ವಶಪಡಿಸಿಕೊಳ್ಳಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಾರಣ ಯಾವುದೇ ಹೇಳಿಕೆ ಪಡೆದುಕೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Last Updated : Apr 24, 2021, 10:08 PM IST

ABOUT THE AUTHOR

...view details