ಕರ್ನಾಟಕ

karnataka

ETV Bharat / bharat

ಪ್ರೀತಿ ನಿರಾಕರಿಸಿದ್ದಕ್ಕೆ ಕೊಂದು ಶವದ ಮೇಲೆ ಅತ್ಯಾಚಾರವೆಸಗಿದ ಸೋದರಮಾವ - ಅತ್ಯಾಚಾರ

ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂದು ಕೋಪಗೊಂಡ ಯುವಕನೊಬ್ಬ ಯುವತಿಯನ್ನು ಹತ್ಯೆಗೈದು ಶವದ ಮೇಲೆ ಅತ್ಯಾಚಾರವೆಸಗಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್​ನಲ್ಲಿ ನಡೆದಿದೆ.

lover-raped-his-girlfriend-after-murder-in-prayagraj
ಪ್ರೀತಿ ನಿರಾಕರಿಸಿದ್ದಕ್ಕೆ ಕೊಂದು ಶವದ ಮೇಲೆ ಅತ್ಯಾಚಾರವೆಸಗಿದ ಕೀಚಕ

By

Published : Jun 4, 2021, 7:16 PM IST

ಪ್ರಯಾಗರಾಜ್: ಹುಡುಗಿ ತನ್ನ ಪ್ರೀತಿಯನ್ನು ಒಪ್ಪಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ಆಕೆಯನ್ನು ಕೊಲೆಗೈದು ಹೆಣದ ಮೇಲೆ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಪ್ರಯಾಗರಾಜ್​ ಬಳಿಯ ಕೊರಾವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯುವತಿ ಮೇ 30 ರಂದು ಸಂಬಂಧಿಕರ ಮದುವೆಗೆ ಆಗಮಿಸಿದ್ದಳು. ಮರುದಿನ ಮದುವೆ ಸಮಾರಂಭದಲ್ಲಿದ್ದ ಯುವತಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಜೂನ್ 1 ರಂದು ಯುವತಿಯ ಕುಟುಂಬದವರು ಈ ಬಗ್ಗೆ ದೂರು ದಾಖಲಿಸಿದ್ದರು. ಪ್ರಕರಣ ಬೆನ್ನತ್ತಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು.

ಪೊಲೀಸರು ಪತ್ತೆಗೆ ಯತ್ನಿಸಿದಾಗ ಯುವತಿಯ ಸೋದರ ಮಾವನ ಮೇಲೆ ಅನುಮಾನ ಬಂದಿದೆ. ಆದರೆ ಇದಕ್ಕೆ ಸರಿಯಾದ ಪುರಾವೆಗಳು ದೊರೆತಿಲ್ಲ. ಬಳಿಕ ಯುವತಿಯ ಶವ ಗ್ರಾಮದ ಬಾವಿಯೊಂದರಲ್ಲಿ ಪತ್ತೆಯಾಗಿದೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ಸೋದರ ಮಾವನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದರು.

ಈ ವೇಳೆ ನಾನು ಅವಳನ್ನು ಪ್ರೀತಿಸುತ್ತಿದ್ದೆ. ಈ ವಿಷಯವನ್ನು ಆಕೆಯ ಬಳಿ ಹೇಳಿಕೊಂಡಾಗ ನಿರಾಕರಿಸಿದಳು. ಇದರಿಂದ ತಾಳ್ಮೆ ಕಳೆದುಕೊಂಡ ನಾನು ಆಕೆಯನ್ನು ಕೊಂದು ನಂತರ ಶವದ ಮೇಲೆ ಅತ್ಯಾಚಾರವೆಸಗಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ಸಿಎಂ ಬಿಎಸ್​​ವೈ, ಸಚಿವರಿಂದ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ : ಹೈಕೋರ್ಟ್ ಅಸಮಾಧಾನ

ABOUT THE AUTHOR

...view details