ನವದೆಹಲಿ: ಕೋವಿಡ್ ಲಾಕ್ಡೌನ್ನಿಂದಾಗಿ ಈಗಷ್ಟೇ ದೇಶ ಅರ್ಥಿಕವಾಗಿ ಚೇತರಿಸಿಕೊಳ್ಳುತ್ತಿದೆ. ಈ ಬೆನ್ನಲ್ಲೇ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರುತ್ತಿದ್ದು, ಇಂದಿನಿಂದ ಪೆಟ್ರೋಲಿಯಂ ಕಂಪನಿಗಳು ವಾಣಿಜ್ಯ ಬಳಕೆಯ ಗ್ಯಾಸ್ ದರ ಹೆಚ್ಚಿಸಿವೆ. ಇದೀಗ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 100 ರೂ. ಏರಿಸಲಾಗಿದೆ.
ತೈಲ, ತರಕಾರಿ ಸೇರಿದಂತೆ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಹಕರು ಈಗಾಗಲೇ ಕಂಗಾಲಾಗಿದ್ದಾರೆ. ಈ ನಡುವೆಯೇ ಇಂದಿನಿಂದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಲಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಹೋಟೆಲ್, ರೆಸ್ಟೋರೆಂಟ್‌ನಲ್ಲಿ ಆಹಾರ ಮತ್ತು ಪಾನೀಯಗಳ ಬೆಲೆ ಕೂಡ ದುಬಾರಿಯಾಗಲಿದೆ.