ನವದೆಹಲಿ:ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತ ಇಂದಿನಿಂದ ಪ್ರಾರಂಭವಾಗುತ್ತಿದೆ. ಇನ್ನು, ಮಾರ್ಚ್-ಏಪ್ರಿಲ್‌ನಲ್ಲಿ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಧಿವೇಶನದ ಅವಧಿಯನ್ನು ಕಡಿತಗೊಳಿಸುವ ಸಾಧ್ಯತೆಯಿದೆ. ಏಕೆಂದರೆ ಹೆಚ್ಚಿನ ಉನ್ನತ ನಾಯಕರು ಪ್ರಚಾರದಲ್ಲಿ ನಿರತರಾಗಿದ್ದಾರೆ. ಇನ್ನು ಈ ಅಧಿವೇಶನ ಏಪ್ರಿಲ್ 8 ರಂದು ಮುಕ್ತಾಯಗೊಳ್ಳಲಿದೆ.
ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸೋಂ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ದೃಷ್ಟಿಯಿಂದ, ಎಲ್ಲಾ ಪಕ್ಷಗಳು ಅಧಿವೇಶನದ ಅವಧಿಯನ್ನು ಕಡಿತಗೊಳಿಸಲು ಬೆಂಬಲಿಸುತ್ತಿವೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ನಿಟ್ಟಿನಲ್ಲಿ ಇನ್ನೂ ಅಧಿಕೃತ ನಿರ್ಧಾರ ತೆಗೆದುಕೊಂಡಿಲ್ಲ.
ಅಧಿವೇಶನದ ಎರಡನೇ ಹಂತದಲ್ಲಿ, ಸರ್ಕಾರದ ಗಮನವು ಮುಖ್ಯವಾಗಿ ಹಣಕಾಸು ಮಸೂದೆ ಮತ್ತು 2021-22ರ ಆರ್ಥಿಕ ವರ್ಷಕ್ಕೆ ಅನುದಾನಕ್ಕಾಗಿ ಪೂರಕ ಬೇಡಿಕೆಗಳನ್ನು ಅಂಗೀಕರಿಸುವುದು. ಈ ಕಡ್ಡಾಯ ಕಾರ್ಯಸೂಚಿಗಳ ಹೊರತಾಗಿ, ಈ ಅಧಿವೇಶನದಲ್ಲಿ ಅಂಗೀಕರಿಸಬೇಕಾದ ಹಲವಾರು ಮಸೂದೆಗಳನ್ನು ಸರ್ಕಾರ ಪಟ್ಟಿ ಮಾಡಿದೆ.