ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಆರ್ ಕೆ ಮಾಥೂರ್ ರಕ್ಷಣಾ ಸಚಿವ ರಾಜನಾಥ್ ಸಿಂಗ್ರನ್ನು ಇಂದು ದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಲಡಾಖ್, ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ಸ್
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಆರ್ ಕೆ ಮಾಥೂರ್ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ..
rajnathsingh
ಎಲ್ಲಾ ಲೆಫ್ಟಿನೆಂಟ್ ಗವರ್ನರ್ಗಳು ಕಾಶ್ಮೀರ ಸಮಸ್ಯೆ ಮತ್ತು 370ನೇ ವಿಧಿಯನ್ನು ರದ್ದುಪಡಿಸುವ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಜೂನ್ 24ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸರ್ವ ಪಕ್ಷಗಳ ಸಭೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮೂವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ 14 ರಾಜಕೀಯ ಪಕ್ಷಗಳ ಮುಖಂಡರನ್ನು ಕೇಂದ್ರ ಆಹ್ವಾನಿಸಿರುವುದರಿಂದ ಈ ಸಭೆ ಮಹತ್ವದ್ದಾಗಿದೆ.
ಇದನ್ನೂ ಓದಿ:ಫಾದರ್ಸ್ ಡೇ ದಿನವೇ ಮಂಡ್ಯದಲ್ಲಿ ತಂದೆ-ಮಗಳ ದುರಂತ ಅಂತ್ಯ