ಕರ್ನಾಟಕ

karnataka

ETV Bharat / bharat

ಲುಧಿಯಾನ ಕೋರ್ಟ್​ ಸಂಕೀರ್ಣ ಸ್ಫೋಟ ಪ್ರಕರಣ: ಮಾಜಿ ಪೊಲೀಸ್​ ಸಿಬ್ಬಂದಿಯೇ ಆರೋಪಿ! - Gagandeep Singh accused of bomb blast case

Ludhiana Court Blast: ಲೂಧಿಯಾನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗುರುವಾರ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

Ludhiana Court Blast
Ludhiana Court Blast

By

Published : Dec 25, 2021, 9:29 AM IST

Updated : Dec 25, 2021, 11:54 AM IST

ನವದೆಹಲಿ: ಪಂಜಾಬ್​ನ ಲುಧಿಯಾನದಲ್ಲಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಸಂಭವಿಸಿದ ಬಾಂಬ್​ ಸ್ಫೋಟಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಆರೋಪಿ ಗುರುತು ಪತ್ತೆ ಹಚ್ಚಿದ್ದು, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ಪಂಜಾಬ್‌ನ ಲುಧಿಯಾನದ ನ್ಯಾಯಾಲಯದಲ್ಲಿ ನಡೆದ ಸ್ಫೋಟದಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ಆ ಮೃತದೇಹ ಆತ್ಮಾಹುತಿ ಬಾಂಬರ್‌ನದ್ದು ಎಂದು ನಂಬಲಾಗಿದೆ. ಆತ್ಮಾಹುತಿ ಬಾಂಬರ್ ಮಾಜಿ ಪೊಲೀಸ್ ಸಿಬ್ಬಂದಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಓದಿ:ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಸ್ಫೋಟ: ಆಘಾತ ವ್ಯಕ್ತಪಡಿಸಿದ ನ್ಯಾಯಮೂರ್ತಿ ಎನ್ ವಿ ರಮಣ

ಮೂಲಗಳ ಪ್ರಕಾರ, ಸ್ಫೋಟದಲ್ಲಿ ಸಾವನ್ನಪ್ಪಿದ ವ್ಯಕ್ತಿ ಮಾಜಿ ಪೊಲೀಸ್ ಸಿಬ್ಬಂದಿ ಗಗನ್‌ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಖನ್ನಾದಲ್ಲಿನ ಸದರ್ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿದ್ದ ಸಿಂಗ್​ನನ್ನು 2019 ರಲ್ಲಿ ಸೇವೆಯಿಂದ ವಜಾಗೊಳಿಸಲಾಯಿತು. 785 ಗ್ರಾಂ ಹೆರಾಯಿನ್‌ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಂತರ ಎರಡು ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದ. ನಂತರ ಗಗನ್‌ದೀಪ್ ಸಿಂಗ್​ನನ್ನು ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡಲಾಯಿತು.

ಲೂಧಿಯಾನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಸಂಭವಿಸಿದ ಬಾಂಬ್​ ಸ್ಫೋಟ

ಪಂಜಾಬ್ ಪೊಲೀಸರು ಮತ್ತು ಎನ್‌ಐಎ ತಂಡ ಆರೋಪಿ ಗಗನ್‌ದೀಪ್ ನಿವಾಸದ ಮೇಲೆ ನಿನ್ನೆ ತಡರಾತ್ರಿ ದಾಳಿ ನಡೆಸಿತು. ಈ ವೇಳೆ ಪೊಲೀಸರ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಚಿತ್ರಗಳು ಸಿಕ್ಕಿವೆ. ಗಗನ್‌ದೀಪ್‌ಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಪಂಜಾಬ್ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ.

Last Updated : Dec 25, 2021, 11:54 AM IST

ABOUT THE AUTHOR

...view details