ಕೊತ್ವಾಲಿ (ಉತ್ತರಪ್ರದೇಶ) :22 ವರ್ಷದ ಎಂಎ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಕೊತ್ವಾಲಿಯಲ್ಲಿ ನಡೆದಿದೆ. ಪ್ರೀತಿಯಲ್ಲಿ ಮೋಸ ಹೋಗಿದ್ದಕ್ಕಾಗಿ ಮನೆಯಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆಂದು ತಿಳಿದು ಬಂದಿದೆ.
ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಸ್ಥಳದಲ್ಲಿ ಸೂಸೈಡ್ ನೋಟ್ ಲಭ್ಯವಾಗಿದ್ದು, ಅದರಲ್ಲಿ ಪ್ರೀತಿಸಿ ಮೋಸ ಹೋಗಿರುವ ಬಗ್ಗೆ ಮಾಹಿತಿ ನೀಡಿದ್ದಾಳೆ. ಇದರ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು, ಆರೋಪಿ ಸಲ್ಮಾನ್ ಎಂಬಾತನನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:'ಉಚಿತ ಕೊಡುಗೆ' ಘೋಷಿಸಿದ್ದಕ್ಕೆ ರಾಜಕೀಯ ಪಕ್ಷಗಳ ನೋಂದಣಿ ರದ್ದು ಅಸಾಧ್ಯ : ಚುನಾವಣಾ ಆಯೋಗ
ಕಳೆದ ಕೆಲ ದಿನಗಳಿಂದ ಯುವತಿ ಮಾನಸಿಕ ಒತ್ತಡಕ್ಕೊಳಗಾಗಿದ್ದಳು ಎಂದು ತಿಳಿದು ಬಂದಿದೆ. ಸಲ್ಮಾನ್ ನೀಡಿರುವ ಚಿತ್ರಹಿಂಸೆಯಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಯುವತಿಯ ಮೃತದೇಹವನ್ನ ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ.
ಸೊಸೈಡ್ ನೋಟ್ನಲ್ಲಿ ನೀಡಿರುವ ಮಾಹಿತಿ ಪ್ರಕಾರ ಸಲ್ಮಾನ್-ಖುಷ್ಬೂ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಒಂದು ವರ್ಷದಿಂದ ಯುವತಿಗೆ ಆತ ತೊಂದರೆ ನೀಡುತ್ತಿದ್ದನಂತೆ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.