ಕರ್ನಾಟಕ

karnataka

ETV Bharat / bharat

'ದಿ ಕಾಶ್ಮೀರ್​​ ಫೈಲ್ಸ್​​' ಸಿನಿಮಾ ವೀಕ್ಷಣೆಗೆ ಪೊಲೀಸರಿಗೆ ರಜೆ ನೀಡಿದ ಮಧ್ಯಪ್ರದೇಶ - ಮಧ್ಯಪ್ರದೇಶ ಪೊಲೀಸರಿಗೆ ರಜೆ ಘೋಷಣೆ

ಮಾರ್ಚ್​​ 11ರಂದು ತೆರೆ ಕಂಡಿರುವ ದಿ ಕಾಶ್ಮೀರ್​ ಫೈಲ್ಸ್​ ಚಿತ್ರಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ. ಇದರ ಬೆನ್ನಲ್ಲೇ ಮಧ್ಯಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ..

The Kashmir Files
The Kashmir Files

By

Published : Mar 14, 2022, 3:14 PM IST

ಭೋಪಾಲ್​(ಮಧ್ಯಪ್ರದೇಶ):ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ನಡೆದ ದೌರ್ಜನ್ಯ ಆಧಾರಿತ ನಿರ್ಮಾಣಗೊಂಡಿರುವ 'ದಿ ಕಾಶ್ಮೀರ್​ ಫೈಲ್ಸ್'​​ ಚಿತ್ರಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ.

ಈ ಸಿನಿಮಾಗೆ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳು ಈಗಾಗಲೇ ತೆರಿಗೆ ವಿನಾಯತಿ ನೀಡಿವೆ. ಇದೀಗ ಒಂದು ಹೆಜ್ಜೆ ಮುಂದೆ ಹೋಗಿರುವ ಮಧ್ಯಪ್ರದೇಶ ಸರ್ಕಾರ, ಚಿತ್ರ ವೀಕ್ಷಣೆ ಮಾಡಲು ಅಲ್ಲಿನ ಪೊಲೀಸರಿಗೆ ರಜೆ ಘೋಷಣೆ ಮಾಡಿದೆ.

ಮಾರ್ಚ್​​ 11ರಂದು ತೆರೆ ಕಂಡಿರುವ ಈ ಚಿತ್ರ ಈಗಾಗಲೇ 2 ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣ್ತಿದೆ. ಈ ಚಿತ್ರ ವೀಕ್ಷಣೆ ಮಾಡಲು ಮಧ್ಯಪ್ರದೇಶ ಪೊಲೀಸರಿಗೆ ರಜೆ ಘೋಷಣೆ ಮಾಡಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ:ಬುಧವಾರದಿಂದ 12-14 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನ್​​.. 60 ಮೇಲ್ಪಟ್ಟ ಎಲ್ಲರಿಗೂ 'ಬೂಸ್ಟರ್​'

ನಿನ್ನೆಯಷ್ಟೇ ಈ ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯ್ತಿ ನೀಡುತ್ತಿರುವುದಾಗಿ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಅಲ್ಲಿನ ಗೃಹ ಸಚಿವ ನರೋತ್ತಮ್​ ಮಿಶ್ರಾ, ಸಿನಿಮಾ ವೀಕ್ಷಣೆ ಮಾಡಲು ರಾಜ್ಯದ ಪೊಲೀಸರಿಗೆ ರಜೆ ನೀಡುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ವಿವೇಕ್​ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ದಿ ಕಾಶ್ಮೀರ್​ ಫೈಲ್ಸ್​ ಚಿತ್ರದಲ್ಲಿ 1990ರಲ್ಲಿ ಕಾಶ್ಮೀರಿ ಪಂಡಿತರ ಮೇಲೆ ನಡೆದ ದೌರ್ಜನ್ಯದ ವಿಷಯವಾಗಿದೆ. ಈ ಚಿತ್ರಕ್ಕೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ಸಹ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶ, ಗುಜರಾತ್​ ಹಾಗೂ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಇದಕ್ಕೆ ತೆರಿಗೆ ವಿನಾಯ್ತಿ ನೀಡಲಾಗಿದೆ. ಕಳೆದ ಮೂರು ದಿನಗಳಲ್ಲಿ ಈ ಚಿತ್ರ ₹35ಕೋಟಿಗೂ ಅಧಿಕ ಗಳಿಕೆ ಮಾಡಿದೆ.​

ABOUT THE AUTHOR

...view details