ಭೋಪಾಲ್ (ಮಧ್ಯಪ್ರದೇಶ): ಇಲ್ಲಿನ ವಿಧಾನಸಭೆಯಲ್ಲಿ ಧರ್ಮ ಸ್ವಾತಂತ್ರ್ಯ ಮಸೂದೆ 2021 ಅಂಗೀಕರಿಸಲ್ಪಟ್ಟಿದೆ. ಕಳೆದ ವರ್ಷ ಡಿಸೆಂಬರ್ನಲ್ಲಿಯೇ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಈ ಮಸೂದೆ ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದುಕೊಂಡಿತ್ತು.
ಈ ಕುರಿತು ಪ್ರತಿಕ್ರಿಯಿಸಿರುವ ಶಿವರಾಜ್ ಸಿಂಗ್ ಚೌಹಾಣ್, ನಾವು ಬಲವಂತದ ಮತಾಂತರವನ್ನು ಎಂದಿಗೂ ಒಪ್ಪುವುದಿಲ್ಲ. ಹೊಸ ಮಸೂದೆಯಡಿಯಲ್ಲಿ ಅಂತಹವರು 10 ವರ್ಷ ಜೈಲು ಶಿಕ್ಷೆ ಮತ್ತು ಕನಿಷ್ಠ 50,000 ರೂ. ದಂಡ ಎದುರಿಸಬೇಕಾಗುತ್ತದೆ. ಅಪ್ರಾಪ್ತ ಬಾಲಕಿಯರನ್ನು ಮತಾಂತರಗೊಳಿಸಿ, ವಿವಾಹವಾಗಿ ಆ ಮೂಲಕ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಘಟನೆಗಳು ಬೆಳಕಿಗೆ ಬಂದ ಹಿನ್ನೆಲೆ ಈ ಕ್ರಮ ಜರುಗಿಸಲಾಗಿದೆ ಎಂದಿದ್ದಾರೆ.
ಈ ಹೊಸ ಮಸೂದೆಯ ಪ್ರಕಾರ, ಅಪ್ರಾಪ್ತೆ, ಮಹಿಳೆ ಅಥವಾ ವ್ಯಕ್ತಿಯನ್ನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದಿಂದ ಬಲವಂತವಾಗಿ ಮತಾಂತರಗೊಳಿಸಿದರೆ ಅಂತಹವರಿಗೆ ಕನಿಷ್ಠ 2-10 ವರ್ಷ ಜೈಲು ಶಿಕ್ಷೆ, ಕನಿಷ್ಠ 50 ಸಾವಿರ ರೂ ದಂಡ ವಿಧಿಸಲಾಗುತ್ತದೆ ಎಂದಿದ್ದಾರೆ.