ಶಿವಪುರಿ (ಮಧ್ಯಪ್ರದೇಶ) : ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಪರ ಮತ ಚಲಾಯಿಸಲಿಲ್ಲ ಎಂಬ ಕಾರಣಕ್ಕಾಗಿ ಕುಟುಂಬವೊಂದರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ಸಚಿವ ಸುರೇಶ್ ಧಕಡ್ ರಾತ್ಖೇಡ ಹಾಗೂ ಬೆಂಬಲಿಗರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸಂತ್ರಸ್ತರು ನ್ಯಾಯಕ್ಕಾಗಿ ಶಿವಪುರಿ ಎಎಸ್ಪಿ ತಿಳಿಸಿದ್ದಾರೆ.
ಬಿಜೆಪಿಗೆ ಮತ ಚಲಾಯಿಸದಿದ್ದಕ್ಕೆ ಕುಟುಂಬದ ಮೇಲೆ ಹಲ್ಲೆ ಆರೋಪ ಈ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ಭುರಿಯಾ, ಘಟನೆ ಕುರಿತಂತೆ ಈವರೆಗೆ ನಮಗೆ ಯಾವುದೇ ದೂರು ಬಂದಿರಲಿಲ್ಲ. ಸದ್ಯ ಈ ವಿಚಾರ ನಮ್ಮ ಗಮನಕ್ಕೆ ಬಂದಿದ್ದು, ಸಂತ್ರಸ್ತ ಕುಟುಂಬ ಹಾಗೂ ಸಚಿವರ ಕುಟುಂಬದ ಮಧ್ಯೆ ವಿವಾದವಿದೆ ಅನ್ನೋ ಮಾಹಿತಿ ತಿಳಿದು ಬಂದಿದೆ. ಅಲ್ಲದೇ ಸಂತ್ರಸ್ತ ಕುಟುಂಬವು ಸುಳ್ಳು ಆರೋಪ ಮಾಡುತ್ತಿದೆ ಎಂದು ಸಚಿವರೂ ಹೇಳಿಕೆ ನೀಡಿದ್ದಾರೆ. ಹಾಗಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತೇವೆ ಎಂದು ಹೇಳಿದರು.
ಇತ್ತೀಚೆಗೆ ನಡೆದ ಬೈ ಎಲೆಕ್ಷನ್ನಲ್ಲಿ ಬಿಜೆಪಿ 19 ಸ್ಥಾನಗಳನ್ನು ಪಡೆದು ಗೆಲುವಿನ ನಗೆ ಬೀರಿತ್ತು.