ಕರ್ನಾಟಕ

karnataka

ETV Bharat / bharat

ರೈತರ ಪ್ರತಿಭಟನೆಗೆ ಕೈ ಕಾರ್ಯಕರ್ತರ ಬೆಂಬಲ: ಪೊಲೀಸರಿಂದ ಜಲ ಫಿರಂಗಿ ಪ್ರಯೋಗ - ಹೋರಾಟಗಾರರ ಮೇಲೆ ಪೊಲೀಸರಿಂದ ಜಲ ಫಿರಂಗಿ

ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. ಮಧ್ಯಪ್ರದೇಶದಲ್ಲಿ ರೈತರ ಈ ಪ್ರತಿಭಟನೆಗೆ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲ ಸೂಚಿಸಿದ್ದು, ಪೊಲೀಸರು ಹೋರಾಟಗಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗಿಸಿದ್ದಾರೆ.

ರೈತರ ಪ್ರತಿಭಟನೆಗೆ ಕೈ ಕಾರ್ಯಕರ್ತರ ಬೆಂಬಲ
ರೈತರ ಪ್ರತಿಭಟನೆಗೆ ಕೈ ಕಾರ್ಯಕರ್ತರ ಬೆಂಬಲ

By

Published : Jan 23, 2021, 1:56 PM IST

Updated : Jan 23, 2021, 2:37 PM IST

ಮಧ್ಯಪ್ರದೇಶ: ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ. ರೈತರ ಈ ಪ್ರತಿಭಟನೆಗೆ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲ ಸೂಚಿಸಿದ್ದು, ಮೆರವಣಿಗೆಯಲ್ಲಿದ್ದ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲ ಫಿರಂಗಿ ಪ್ರಯೋಗಿಸಿದರು.

ಹೋರಾಟಗಾರರನ್ನು ಚದುರಿಸಲು ಪ್ರಯತ್ನಿಸಿದ ಪೊಲೀಸರು

ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜವಾಹರ್ ಚೌಕ್‌ನಿಂದ ಭೋಪಾಲ್‌ನ ರಾಜ್ ಭವನದ ವರೆಗೆ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನೆ ಹತ್ತಿಕ್ಕುವ ಉದ್ದೇಶದಿಂದ ಪೊಲೀಸರು ಜಲ ಫಿರಂಗಿ ಬಳಸಿ, ಹೋರಾಟಗಾರರನ್ನು ಚದುರಿಸಲು ಪ್ರಯತ್ನಿಸಿದರು.

Last Updated : Jan 23, 2021, 2:37 PM IST

ABOUT THE AUTHOR

...view details