ನವದೆಹಲಿ:ದೇಶದ ಹಲವೆಡೆ ಆಗಾಗ ಭೂಕಂಪನಗಳು ಸಂಭವಿಸುತ್ತಿರುತ್ತವೆ. ಲಡಾಖ್ ಕೇಂದ್ರಾಡಳಿತ ಪ್ರದೇಶದ ದೋಡಾದಲ್ಲಿ ಭೂಕಂಪನ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಮಾಹಿತಿ ನೀಡಿದ್ದು, ಯಾವುದೇ ಪ್ರಾಣಹಾನಿ, ಆಸ್ತಿ-ಪಾಸ್ತಿ ನಷ್ಟದ ವರದಿಯಾಗಿಲ್ಲ.
ಮುಂಜಾನೆ 2.53ಕ್ಕೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಭೂಕಂಪನಕ್ಕೆ ಒಳಗಾದ ಪ್ರದೇಶ ಕಾರ್ಗಿಲ್ನಿಂದ 169 ಕಿಲೋಮೀಟರ್ ಉತ್ತರಕ್ಕಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಟ್ವೀಟ್ನಲ್ಲಿ ಉಲ್ಲೇಖಿಸಲಾಗಿದೆ. ಇದರ ಜೊತೆಗೆ ಮಿಜೋರಾಂನಲ್ಲಿ 5.6ರಷ್ಟು ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.