ಮುಂಬೈ:ಮಹಾರಾಷ್ಟ್ರದ ವಿವಿಧ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಇದರಿಂದ ಜನ-ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಕೊಂಕಣ ರೈಲ್ವೆ ಸಂಚಾರ ಸ್ಥಗಿತಗೊಳಿಸಲಾಗಿದ್ದು, ವಿವಿಧ ರೈಲುಗಳಲ್ಲಿ 6 ಸಾವಿರಕ್ಕೂ ಅಧಿಕ ಪ್ರಯಾಣಿಕರು ಸಿಲುಕಿಕೊಂಡಿದ್ದಾರೆಂದು ತಿಳಿದು ಬಂದಿದೆ.
ರತ್ನಗಿರಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಕೆಲವೊಂದು ರೈಲುಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಅದರೊಳಗಿರುವ ಪ್ರಯಾಣಿಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದಾಗಿ ರತ್ನಗಿರಿಯ ಚಿಪ್ಲುನ್ ಮತ್ತು ಕಾಮಥೆ ನಿಲ್ದಾಣಗಳ ನಡುವಿನ ವಶಿಷ್ಠ ನದಿ ಸೇತುವೆ ಅಪಾಯದ ಮಟ್ಟ ಮೀರಿ ಹರಿಯತ್ತಿದೆ ಎಂದು ತಿಳಿದು ಬಂದಿದೆ.