ಬುಲ್ದಾನಾ (ಮಹಾರಾಷ್ಟ್ರ): ರಸ್ತೆ ನಿರ್ಮಾಣಕ್ಕೆಂದು ಬಳಸುವ ಕಬ್ಬಿಣದ ಸರಳುಗಳನ್ನು ಹೊತ್ತು ಸಾಗುತ್ತಿದ್ದ ಟಿಪ್ಪರ್ ಪಲ್ಟಿಯಾಗಿ 13 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯ ಸಮೃದ್ಧಿ ಹೆದ್ದಾರಿಯಲ್ಲಿ ನಡೆದಿದೆ.
ಕಬ್ಬಿಣದ ಸರಳುಗಳ ಹೊತ್ತಿದ್ದ ಟಿಪ್ಪರ್ ಪಲ್ಟಿ : 13 ಕಾರ್ಮಿಕರ ದುರ್ಮರಣ - ಮಹಾರಾಷ್ಟ್ರ ಭೀಕರ ರಸ್ತೆ ಅಪಘಾತ
ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 13 ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ..
ಕಬ್ಬಿಣದ ಸರಳುಗಳ ಹೊತ್ತಿದ್ದ ಟಿಪ್ಪರ್ ಪಲ್ಟಿ
ಅದೇ ಟಿಪ್ಪರ್ನಲ್ಲಿ ಕಾರ್ಮಿಕರೂ ಕುಳಿತು ಸಾಗುತ್ತಿದ್ದು, ವಾಹನ ಪಲ್ಟಿಯಾಗುತ್ತಿದ್ದಂತೆಯೇ ಕಾರ್ಮಿಕರು ಟಿಪ್ಪರ್ ಹಾಗೂ ಸರಳುಗಳ ಅಡಿ ಸಿಲುಕಿದ್ದಾರೆ. ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: ಮೊಹರಂ ದಿನವೇ ದುರಂತ: ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು
Last Updated : Aug 20, 2021, 4:18 PM IST