ಕರ್ನಾಟಕ

karnataka

ETV Bharat / bharat

ಗಲಭೆ ಉದ್ವಿಗ್ನ.. ಮಹಾರಾಷ್ಟ್ರ-ಬೆಳಗಾವಿ ಗಡಿ ಬಂದ್​! - ಮಹಾರಾಷ್ಟ್ರದಲ್ಲಿ ಪ್ರತಿಭಟನೆ

ಕರ್ನಾಟಕ ಪೊಲೀಸ್ ಇಲಾಖೆಯಿಂದ ಕಾಗವಾಡದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಮಹಾರಾಷ್ಟ್ರದಿಂದ ಬೆಳಗಾವಿಗೆ ಯಾರನ್ನೂ ಅನುಮತಿಸಲಾಗುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ಆಡಳಿತ ಮಂಡಳಿ ಈ ಕ್ರಮಗಳನ್ನು ಕೈಗೊಂಡಿದೆ. ಮೀರಜ್ ನಗರದಲ್ಲಿಯೂ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ..

Maharashtra Belagavi border sealed by Karnataka government
ಮಹಾರಾಷ್ಟ್ರ-ಬೆಳಗಾವಿ ಗಡಿ ಬಂದ್​

By

Published : Dec 18, 2021, 2:32 PM IST

ಸಾಂಗ್ಲಿ(ಮಹಾರಾಷ್ಟ್ರ):ಮಹಾರಾಷ್ಟ್ರ-ಬೆಳಗಾವಿ ಗಡಿಯಲ್ಲಿ ಗಲಭೆ ಉದ್ವಿಗ್ನಗೊಳ್ಳುತ್ತಿರುವ ಹಿನ್ನೆಲೆ ಕಾಗವಾಡ ಗಡಿ ಭಾಗವನ್ನು ಬಂದ್​ ಮಾಡಲಾಗಿದೆ. ಬೆಂಗಳೂರಿನ ಸ್ಯಾಂಕಿ ಕೆರೆ ಬಳಿ ಇರುವ ಶಿವಾಜಿ ಪುತ್ಥಳಿಗೆ ಕಿಡಿಗೇಡಿಗಳು ಮಸಿ ಬಳಿದು ಅವಮಾನ ಮಾಡಿದ್ದಾರೆ.

ಬೆಳಗಾವಿಯ ಅನಗೋಳದ ಕನಕದಾಸ ಕಾಲೋನಿಯಲ್ಲಿ ಇಂದು ನಸುಕಿಜಾವ 3 ಗಂಟೆ ಸುಮಾರಿಗೆ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಕೆಡವಿ ಕೆಲ ಪುಂಡರು ಅಟ್ಟಹಾಸ ಮೆರೆದಿದ್ದಾರೆ.

ಇದಾದ ಬಳಿಕ ಎಂಇಎಸ್, ಶ್ರೀರಾಮಸೇನೆ ಶಾಂತಿ ಕದಡುತ್ತಿದೆ. ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ಹಿನ್ನೆಲೆ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕಾಗವಾಡದ ಗಡಿಯನ್ನು ಕರ್ನಾಟಕ ಸರ್ಕಾರ ಮುಚ್ಚಿದೆ.

ಕರ್ನಾಟಕದ ಬೆಂಗಳೂರಿನಲ್ಲಿ ನಡೆದ ಘಟನೆಯ ನಂತರ ಮಹಾರಾಷ್ಟ್ರದಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ. ಮೀರಜ್ ನಗರದಲ್ಲಿ ಶಿವಸೈನಿಕರಿಂದ ಆಂದೋಲನ ಆರಂಭಿಸಲಾಗಿದೆ. ಕರ್ನಾಟಕದ ವಾಹನಗಳ ಮೇಲೆ ಕಲ್ಲು ಎಸೆದು ಧ್ವಂಸಗೊಳಿಸಲಾಗಿದೆ. ಈ ಘಟನೆಯ ನಂತರ ಮಹಾರಾಷ್ಟ್ರ-ಬೆಳಗಾವಿ ಗಡಿಯನ್ನು ಕರ್ನಾಟಕ ಸರ್ಕಾರ ಬಂದ್ ಮಾಡಿದೆ.

ಇದನ್ನೂ ಓದಿ:ಶಿವಸೇನೆ, ಎಂಇಎಸ್ ಹೈಡ್ರಾಮಾ.. ಆರಕ್ಕೂ ಅಧಿಕ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ಪೊಲೀಸ್ ಇಲಾಖೆಯಿಂದ ಕಾಗವಾಡದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಮಹಾರಾಷ್ಟ್ರದಿಂದ ಬೆಳಗಾವಿಗೆ ಯಾರನ್ನೂ ಅನುಮತಿಸಲಾಗುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ಆಡಳಿತ ಮಂಡಳಿ ಈ ಕ್ರಮಗಳನ್ನು ಕೈಗೊಂಡಿದೆ. ಮೀರಜ್ ನಗರದಲ್ಲಿಯೂ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ABOUT THE AUTHOR

...view details