ಪುಣೆ (ಮಹಾರಾಷ್ಟ್ರ): ಐಷಾರಾಮಿ ಕಾರಿನ ಬಾನೆಟ್ ಮೇಲೆ ಕುಳಿತುಕೊಂಡು ಫೋಟೋ ಶೂಟ್ ನಡೆಸಿ ಕಾನೂನು ನಿಯಮ ಉಲ್ಲಂಘನೆ ಮಾಡಿರುವ ವಧುವಿನ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಪ್ರಸಿದ್ಧ ದಿವಾ ಘಾಟ್ನಲ್ಲಿ ನಡೆದಿರುವ ಘಟನೆ ಇದಾಗಿದೆ.
23 ವರ್ಷದ ವಧು ಶುಭಂಗಿ ಕಾರಿನ ಬಾನೆಟ್ ಮೇಲೆ ಕುಳಿತುಕೊಂಡು ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿದ್ದಳು. ಈ ವೇಳೆ ಕೆಲವೊಂದು ನಿಯಮ ಉಲ್ಲಂಘನೆ ಮಾಡಿರುವುದು ಕಂಡು ಬಂದಿತ್ತು. ಜೊತೆಗೆ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾವಣೆ ಮಾಡಿರುವುದು ಸಾಭೀತು ಆಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡಿದ್ದ ಲೂನಿ ಪೊಲೀಸ್ ಠಾಣೆಯ ಅಧಿಕಾರಿಗಳು ಘಟನೆಯ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದರು.