ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಗೃಹ, ಹಣಕಾಸು ಸೇರಿ ಪ್ರಮುಖ ಖಾತೆಗಳನ್ನು ನೀಡಲಾಗಿದೆ.
ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದಾರೆ. ಜೂನ್ 30ರಂದು ಶಿಂಧೆ ಮುಖ್ಯಮುಂತ್ರಿಯಾಗಿ ಹಾಗೂ ಬಿಜೆಪಿಯ ನಾಯಕ ದೇವೇಂದ್ರ ಫಡ್ನವೀಸ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದಾದ 39 ದಿನಗಳ ನಂತರ ಅಂದರೆ ಅಗಸ್ಟ್ 9ರಂದು ಸಚಿವ ಸಂಪುಟ ರಚನೆ ಮಾಡಲಾಗಿತ್ತು. ಇದೀಗ ಆರು ದಿನಗಳ ನಂತರ ಸಂಪುಟದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.