ಮುಂಬೈ(ಮಹಾರಾಷ್ಟ್ರ):ನೂತನ ಮುಖ್ಯಮಂತ್ರಿ ಏಕನಾಥ್ ಶಿಂದೆ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಔರಂಗಾಬಾದ್ಗೆ ಛತ್ರಪತಿ ಸಂಭಾಜಿನಗರವೆಂದೂ, ಉಸ್ಮಾನಾಬಾದ್‌ಗೆ ಧರಶಿವ ಎಂದು ಮರುನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಕ್ಕೂ ಮುಂಚಿತವಾಗಿ ಈ ಆದೇಶ ಹೊರಡಿಸಿತ್ತು. ಇದೀಗ ಮುಖ್ಯಮಂತ್ರಿ ಏಕನಾಥ್ ಶಿಂದೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಮರುನಾಮಕರಣ ನಿರ್ಧಾರ ಕೈಗೊಳ್ಳಲಾಗಿದೆ. ಠಾಕ್ರೆ ನೇತೃತ್ವದ ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರ ಕಾನೂನಾತ್ಮಕವಾಗಿರಲಿಲ್ಲ, ಇದೀಗ ನಮ್ಮ ಸರ್ಕಾರ ತೆಗೆದುಕೊಂಡಿರುವ ಮರುನಾಮಕರಣ ನಿರ್ಧಾರ ಕಾನೂನಾತ್ಮಕವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೊಸ ಪ್ರಸ್ತಾವನೆ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದಿರುವ ಶಿಂದೆ, ನವಿ ಮುಂಬೈ ವಿಮಾನ ನಿಲ್ದಾಣಕ್ಕೆ ಡಿ.ಬಿ ಪಾಟೀಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ.