ಕರ್ನಾಟಕ

karnataka

ಭಾರಿ ಮಳೆಯಿಂದ ಭೂಕುಸಿತ ಉಂಟಾದ ಪ್ರದೇಶಗಳಿಗೆ ಮಹಾ ಸಿಎಂ ಭೇಟಿ.. ಪರಿಶೀಲನೆ

By

Published : Jul 24, 2021, 2:06 PM IST

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾದ ಹಾಗೂ ಪ್ರವಾಹಕ್ಕೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭೇಟಿ ನೀಡಿ ಪ್ರವಾಹ ಪೀಡಿತ ಸ್ಥಳವನ್ನು ಪರಿಶೀಲಿಸುತ್ತಿದ್ದಾರೆ.

places
ಮಹಾರಾಷ್ಟ್ರದಲ್ಲಿ ಭಾರೀ ಮಳೆ

ಮುಂಬೈ/ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾದ ಹಾಗೂ ಪ್ರವಾಹಕ್ಕೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಭೇಟಿ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆ

ರಾಜ್ಯದಲ್ಲಿ ಕಳೆದ ಎರಡು ದಿನಗಳಲ್ಲಿ ಉಂಟಾದ ಭಾರಿ ಮಳೆಯಿಂದಾಗಿ ಪಶ್ಚಿಮ ಮಹಾರಾಷ್ಟ್ರ, ಕೊಂಕಣ ಮತ್ತು ವಿದರ್ಭದಲ್ಲಿ ಭಾರಿ ಅವಾಂತರಗಳು ಸೃಷ್ಟಿಯಾಗಿವೆ. ರಾಯಗಢ್​, ರತ್ನಗಿರಿ ಮತ್ತು ಸತಾರಾ ಜಿಲ್ಲೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ದುರದೃಷ್ಟವಶಾತ್ 76 ಜನರು ಸಾವನ್ನಪ್ಪಿದ್ದಾರೆ.

ರಾಯಗಢ್ ಜಿಲ್ಲೆಯ ಮಹಾದ್ ತಾಲೂಕಿನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 47 ಜನರು ಸಾವನ್ನಪ್ಪಿದ್ದಾರೆ. ಇನ್ನೂ 41 ಜನರು ಕಾಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇಂದು (ಶನಿವಾರ) ಮಹಾದ್‌ಗೆ ಭೇಟಿ ನೀಡಿ ಪ್ರವಾಹ ಪೀಡಿತ ಸ್ಥಳವನ್ನು ಪರಿಶೀಲಿಸುತ್ತಿದ್ದಾರೆ. ಅವರು ಇಂದು ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಮಹಾದ್‌ಗೆ ತೆರಳಲಿದ್ದು, ಅವರು ತಲೈನಲ್ಲಿ ಪ್ರವಾಹಕ್ಕೊಳಗಾದ ಗ್ರಾಮವನ್ನು ಪರಿಶೀಲಿಸಲಿದ್ದಾರೆ.

ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನೆ ಮತ್ತು ನೌಕಾಪಡೆ ಸೇರಿದಂತೆ ವಾಯುಪಡೆಯ ಘಟಕಗಳು ಸಹ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ. ಮಹಾರಾಷ್ಟ್ರದಲ್ಲಿ ವಿಪರೀತ ಮಳೆ ಹಿನ್ನೆಲೆ ರಸ್ತೆಗಳು ಮತ್ತು ಸೇತುವೆಗಳು ಮುಳುಗಿದ್ದು, ರಕ್ಷಣಾ ಕಾರ್ಯಾಚರಣೆಗೆ ಅಡಚಣೆಯುಂಟಾಗಿದೆ.

ಇಂದು ಭೂಕುಸಿತ ಸಂಭವಿಸಿದ್ದ ಸ್ಥಳಗಳಿಗೆ ಭೇಟಿ ನೀಡಿದ ಬಳಿಕ 3.20 ಕ್ಕೆ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರ ಸಿಎಂ ಮುಂಬೈಗೆ ವಾಪಸ್​ ಆಗಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಡೆಡ್ಲಿ ಮಳೆ: 48 ಗಂಟೆಗಳಲ್ಲಿ 129 ಮಂದಿ ಸಾವು

ABOUT THE AUTHOR

...view details