ಮುಂಬೈ:ಇಂದು ರಾತ್ರಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಜನರನ್ನು ಉದ್ದೇಶಿಸಿ ಮಹತ್ವದ ಭಾಷಣ ಮಾಡಲಿದ್ದು, ಕುತೂಹಲ ಕೆರಳಿಸಿದೆ.
ಈ ಬಗ್ಗೆ ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ಮಾಹಿತಿ ನೀಡಿದ್ದು, ಭಾಷಣಕ್ಕೂ ಮುನ್ನ ಸಿಎಂ ಅಲ್ಲಿನ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ತಡೆಗಟ್ಟುವ ಉದ್ದೇಶದಿಂದ ಲಾಕ್ಡೌನ್ ಘೋಷಣೆ ಮಾಡುವ ಸಾಧ್ಯತೆ ಇದೆ ಎಂಬ ಮಾತುಗಳು ಈಗಾಗಲೇ ಕೇಳಿ ಬಂದಿರುವ ಕಾರಣ, ಮುಖ್ಯಮಂತ್ರಿ ಭಾಷಣದ ಮೇಲೆ ಎಲ್ಲರೂ ಕಣ್ಣಿಟ್ಟಿದ್ದಾರೆ.