ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹಾವಳಿ ಮೀತಿ ಮೀರಿದ್ದು, ಈಗಾಗಲೇ ಸೆಕ್ಷನ್ 144 ಜಾರಿಗೊಳಿಸಿ ಅಲ್ಲಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಇದರ ಮಧ್ಯೆ ನಾಳೆ ಮತ್ತೊಂದು ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡುವ ಸಾಧ್ಯತೆ ಇದ್ದು, ನಾಳೆ ಇದರ ಬಗ್ಗೆ ನಿರ್ಧಾರ ಹೊರಬರುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದ್ದು, ಅದರಲ್ಲಿ ರಾಜ್ಯದಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಉಂಟಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಲಾಗಿದೆ. ಜತೆಗೆ ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟಲು ಯಾವೆಲ್ಲ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಗಿದೆ.
ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮತ್ತಷ್ಟು ಕಠಿಣ ರೂಲ್ಸ್: ದಿನಸಿ, ತರಕಾರಿ ಅಂಗಡಿ ನಾಲ್ಕು ಗಂಟೆ ಮಾತ್ರ ಓಪನ್!