ಮುಂಬೈ :ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ31,643 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 27,45,518 ತಲುಪಿದೆ.
ಸೋಮವಾರ 20,854 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 102 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 23,53,307 ಜನ ಸೋಂಕು ಮುಕ್ತರಾಗಿದ್ದು, 54,283 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ 3,36,584 ಸಕ್ರಿಯ ಪ್ರಕರಣಗಳಿವೆ.