ಮುಂಬೈ(ಮಹಾರಾಷ್ಟ್ರ):ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಇದೀಗ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಮಹಾರಾಷ್ಟ್ರ ಸರ್ಕಾರಕ್ಕೆ ಬಹುಮತ ಸಾಬೀತು ಮಾಡಲು ಸೂಚನೆ ನೀಡುವಂತೆ ಮನವಿ ಮಾಡಿದ್ದಾಗಿ ವರದಿಯಾಗಿದೆ.
ಇದನ್ನೂ ಓದಿ:ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ ಕರು; ಪಕ್ಕದಲ್ಲೇ ನಿಂತು ಕಣ್ಣೀರು ಹಾಕಿದ ಹಸು!
ಮಹಾವಿಕಾಸ್ ಆಘಾಡಿ ಮೈತ್ರಿ ಸರ್ಕಾರದಲ್ಲಿ ಬಿರುಕು ಉಂಟಾಗಿರುವ ಬೆನ್ನಲ್ಲೇ ಇಂದು ಬೆಳಗ್ಗೆ ದೆಹಲಿ ಪ್ರವಾಸ ಕೈಗೊಂಡಿದ್ದ ಫಡ್ನವೀಸ್, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.
ಗವರ್ನರ್ ಭೇಟಿ ವೇಳೆ ಮಹಾರಾಷ್ಟ್ರದ ಮೈತ್ರಿ ಸರ್ಕಾರ ಸಂಪೂರ್ಣವಾಗಿ ಬಹುಮತ ಕಳೆದುಕೊಂಡಿದ್ದು, ವಿಶ್ವಾಸಮತಯಾಚನೆ ಮಾಡಲು ಮನವಿ ಮಾಡುವಂತೆ ಕೇಳಿಕೊಂಡಿದ್ದಾಗಿ ತಿಳಿದು ಬಂದಿದೆ. ಜೊತೆಗೆ ಶಿವಸೇನೆಯ 38 ಶಾಸಕರು ಅದರೊಂದಿಗೆ ಮೈತ್ರಿ ಕಳೆದುಕೊಂಡಿದ್ದಾಗಿ ತಿಳಿಸಿದ್ದಾರೆಂದು ಹೇಳಲಾಗುತ್ತಿದೆ.