ಮುಂಬೈ (ಮಹಾರಾಷ್ಟ್ರ): ಇಂಗ್ಲೆಂಡ್ನಲ್ಲಿ ಕೋವಿಡ್ ಹೊಸ ರೂಪಾಂತರ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಜನವರಿ 5ರವರೆಗೆ ಪುರಸಭೆ ವ್ಯಾಪ್ತಿಯಲ್ಲಿ ರಾತ್ರಿ ಕರ್ಫ್ಯೂ ವಿಧಿಸಿ ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.
ಡಿಸೆಂಬರ್ 22ರ ಮಂಗಳವಾರದಿಂದ ಪ್ರತಿದಿನ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಯೂರೋಪಿಯನ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರು ಕಡ್ಡಾಯವಾಗಿ 14 ದಿನಗಳವರೆಗೆ ಸಾಂಸ್ಥಿಕ ಕ್ವಾರಂಟೈನ್ನಲ್ಲಿರಬೇಕಾಗುತ್ತದೆ. ಅಲ್ಲದೆ ಅವರು ಐದು ಅಥವಾ ಏಳನೇ ದಿನ ಕೋವಿಡ್ RTPCR ಪರೀಕ್ಷೆ ಮಾಡಿಸಿಕೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.