ಕರ್ನಾಟಕ

karnataka

ETV Bharat / bharat

ಮಹಾರಾಷ್ಟ್ರದ 10 ಸಚಿವರು, 20 ಶಾಸಕರಿಗೆ ಅಂಟಿದ ಕೊರೊನಾ : ಡಿಸಿಎಂ ಅಜಿತ್ ಪವಾರ್ - ಕೊರೊನಾ ಬಗ್ಗೆ ಡಿಸಿಎಂ ಅಜಿತ್ ಪವಾರ್ ಹೇಳಿಕೆ

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಈಗಾಗಲೇ ಸೆಕ್ಷನ್-144 ಜಾರಿಗೊಳಿಸಲಾಗಿದೆ. ಡಿಸೆಂಬರ್ 30 ರಿಂದ ಜನವರಿ 7ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಜನರು ಸೇರುವುದನ್ನು ನಿಷೇಧಿಸಲಾಗಿದೆ..

Maharashtra dcm ajit pawar
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್

By

Published : Jan 1, 2022, 12:22 PM IST

ನಾಸಿಕ್​(ಮಹಾರಾಷ್ಟ್ರ):ಮಹಾರಾಷ್ಟ್ರದಲ್ಲಿ ಕೋವಿಡ್​ ಅಬ್ಬರ ಮುಂದುವರೆದಿದೆ. ಆತಂಕದ ವಾತಾವರಣ ಸೃಷ್ಟಿಯಾಗಿದೆ. ರಾಜ್ಯದ 10 ಸಚಿವರು ಮತ್ತು 20ಕ್ಕೂ ಹೆಚ್ಚು ಶಾಸಕರಿಗೆ ಕೊರೊನಾ ತಗುಲಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ಇಂದು ತಿಳಿಸಿದ್ದಾರೆ.

ಈ ಬಗ್ಗೆ ಖಚಿತ ಪಡಿಸಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ತನಿಖೆಯ ನಂತರ ಸಚಿವರು ಮತ್ತು ಶಾಸಕರಿಗೆ ಕೋವಿಡ್ ತಗುಲಿರುವುದು ಕಂಡು ಬಂದಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೋವಿಡ್​ ದಿನೇದಿನೆ ಏರುತ್ತಿದೆ. ಕೋವಿಡ್ ಸೋಂಕಿತರ ಸಂಖ್ಯೆ ಇದೇ ರೀತಿಯಾಗಿ ಹೆಚ್ಚುತ್ತಲೇ ಇದ್ದರೆ, ಸರ್ಕಾರ ಇನ್ನೂ ಹೆಚ್ಚಿನ ನಿರ್ಬಂಧಗಳನ್ನು ಹೇರಬೇಕಾಗಬಹುದು ಎಂದು ಹೇಳಿದರು.

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಈಗಾಗಲೇ ಸೆಕ್ಷನ್-144 ಜಾರಿಗೊಳಿಸಲಾಗಿದೆ. ಡಿಸೆಂಬರ್ 30 ರಿಂದ ಜನವರಿ 7ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಜನರು ಸೇರುವುದನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ:ದೇಶದಲ್ಲಿ ಹೆಚ್ಚಿದ ಕೋವಿಡ್‌ ತಲ್ಲಣ: ಕಳೆದ 24 ಗಂಟೆಗಳಲ್ಲಿ 22,775 ಕೇಸ್​​, 406 ಮಂದಿ ಸೋಂಕಿಗೆ ಬಲಿ

ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದ ವೇಳೆ ನಿಯೋಜಿಸಲಾದ 35 ಪೊಲೀಸರು ಮತ್ತು ಸರ್ಕಾರಿ ನೌಕರರಿಗೆ ಕೋವಿಡ್ ದೃಢಪಟ್ಟಿದೆ.

ABOUT THE AUTHOR

...view details