ಮುಂಬೈ:ವಿರಾರ್‌ನ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿಯ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅವರನ್ನು ಕೋರಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ತಿಳಿಸಿದ್ದಾರೆ.
ಶುಕ್ರವಾರ ನಸುಕಿನ 3 ಗಂಟೆಯ ವೇಳಗೆ ಪಾಲ್ಘರ್ ಜಿಲ್ಲೆಯ ವಿರಾರ್ನಲ್ಲಿ ಖಾಸಗಿ ಕಟ್ಟಡದ ನಾಲ್ಕು ಅಂತಸ್ತಿನ ವಿಜಯ್ ವಲ್ಲಭ್ ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಇರುವ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.