ಮುಂಬೈ:ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕ ಸಮಾರಂಭಗಳು, ಆಚರಣೆಗಳು ಮತ್ತು ಮನರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಜನರಿಗೆ ಮಿತಿ ಹೇರಿದೆ.
ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಮಾರಂಭಗಳಲ್ಲಿ ಹಾಜರಾಗುವುದನ್ನು 50 ಜನರಿಗೆ ಮಿತಿಗೊಳಿಸಲಾಗಿದೆ. ಈ ಮೊದಲು ಒಳಾಂಗಣ ಪ್ರದೇಶಗಳಲ್ಲಿ ನಡೆಯುವ ಸಮಾರಂಭಗಳಲ್ಲಿ100ಕ್ಕಿಂತ ಹೆಚ್ಚು ಜನರು ಮತ್ತು ತೆರೆದ ಪ್ರದೇಶಗಳಲ್ಲಿ ನಡೆಯುವ ಮದುವೆ ಕಾರ್ಯಕ್ರಮ ಅಥವಾ ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಮತ್ತು ಧಾರ್ಮಿಕ ಸಭೆಗಳಲ್ಲಿ ಭಾಗವಹಿಸಲು 250 ಜನರಿಗೆ ಅವಕಾಶ ನೀಡಲಾಗಿತ್ತು.
ಆದರೆ, ರಾಜ್ಯ ಸರ್ಕಾರ ಗುರುವಾರ ರಾತ್ರಿ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯನ್ನು 50 ಜನರಿಗೆ ಮಿತಿಗೊಳಿಸಿದೆ. ಹೊಸ ಆದೇಶದ ಪ್ರಕಾರ, ಕೇವಲ 20 ಮಂದಿ ಮಾತ್ರ ಅಂತಿಮ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಬಹುದು ಎಂದು ಷರತ್ತು ವಿಧಿಸಿದೆ.