ಕರ್ನಾಟಕ

karnataka

ETV Bharat / bharat

ಮಹಾರಾಷ್ಟ್ರದಲ್ಲಿಲ್ಲ ಲಾಕ್​ಡೌನ್: ನಾಳೆಯಿಂದ ರಾಜ್ಯಾದ್ಯಂತ ಸೆಕ್ಷನ್​ 144 ಜಾರಿ!

2ನೇ ಹಂತದ ಕೋವಿಡ್​ ಅಲೆ ಜೋರಾಗಿರುವ ಕಾರಣ ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಮುಂದಿನ 15 ದಿನಗಳ ಕಾಲ ಸೆಕ್ಷನ್​ 144 ಜಾರಿಗೊಳಿಸಿ ಸಿಎಂ ಆದೇಶ ಹೊರಡಿಸಿದ್ದಾರೆ.

CM Uddhav Thackeray
CM Uddhav Thackeray

By

Published : Apr 13, 2021, 9:20 PM IST

ಮುಂಬೈ: ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಹಾವಳಿ ಹೆಚ್ಚಾಗುತ್ತಿರುವ ಕಾರಣ ಸಿಎಂ ಉದ್ಧವ್ ಠಾಕ್ರೆ ಅಲ್ಲಿನ ಜನರನ್ನುದ್ದೇಶಿಸಿ ಮಹತ್ವದ ಭಾಷಣ ಮಾಡಿದ್ದು, ರಾಜ್ಯದಲ್ಲಿ ಲಾಕ್​ಡೌನ್​ ಹೇರಿಕೆ ಮಾಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾಳೆ ಸಂಜೆಯಿಂದ ಮುಂದಿನ 15 ದಿನಗಳ ಕಾಲ ರಾಜ್ಯಾದ್ಯಂತ ಸೆಕ್ಷನ್​ 144 ಜಾರಿಗೊಳಿಸಲು ನಿರ್ಧರಿಸಲಾಗಿದ್ದು, ಲಾಕ್​ಡೌನ್​ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜತೆಗೆ ರಾಜ್ಯದಲ್ಲಿ ನಾಳೆಯಿಂದ ಹೊಸ ನಿರ್ಬಂಧ ಜಾರಿಗೊಳಿಸುವುದಾಗಿ ಹೇಳಿದ್ದು, ಮತ್ತಷ್ಟು ಕಠಿಣ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.

ಬ್ರೇಕ್​ ದ ಚೈನ್​ ಅಭಿಯಾನಕ್ಕೆ ಚಾಲನೆ ದೊರೆಯಲಿದ್ದು, ಮುಂದಿನ 15 ದಿನಗಳ ಕಾಲ ಅನಗತ್ಯ ಸಂಚಾರಕ್ಕೆ ಬ್ರೇಕ್​ ಬೀಳಲಿದೆ. ಇದರ ಜತೆಗೆ ರಾಜ್ಯದಲ್ಲಿ ಆಮ್ಲಜನಕ ಮತ್ತು ಔಷಧಿ ಕೊರತೆ ನಿಭಾಯಿಸಲು ಭಾರತೀಯ ಸೇನೆ ಸಹಾಯ ಕೋರಿದ್ದಾರೆ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 60,212 ಕೋವಿಡ್​ ಪ್ರಕರಣ ದಾಖಲಾಗಿವೆ ಎಂಬ ಮಾಹಿತಿ ಸಹ ಉದ್ಧವ್ ಠಾಕ್ರೆ ನೀಡಿದ್ದಾರೆ.

ಅಗತ್ಯ ಸೇವೆಗಳಿಗೆ ಮಾತ್ರ ಸ್ಥಳೀಯ ರೈಲು ಮತ್ತು ಬಸ್ ಸಂಚಾರ ಜಾರಿಯಲ್ಲಿರಲಿದ್ದು, ಪೆಟ್ರೋಲ್​ ಪಂಪ್​​ ಹಾಗೂ ಹಣಕಾಸು ಸಂಸ್ಥೆಗಳ ಕಾರ್ಯ ಮುಂದುವರೆಯಲಿದೆ. ಹೋಟೆಲ್​/ರೆಸ್ಟೋರೆಂಟ್​ಗಳು ಮುಚ್ಚಲಿದ್ದು, ಹೋಂ ಡೆಲಿವರಿಗೆ ಅವಕಾಶ ನೀಡಲಾಗಿದೆ.

ಮಹಾರಾಷ್ಟ್ರದಲ್ಲಿ ಈಗಾಗಲೇ ನೈಟ್ ಕರ್ಫ್ಯೂ ಹಾಗೂ ವಾರದ ಕೊನೆಯಲ್ಲಿ ಲಾಕ್​ಡೌನ್​ ಘೋಷಣೆಯಾಗಿದ್ದು, ಇಷ್ಟಾದರೂ ಕೋವಿಡ್​​ ನಿಯಂತ್ರಣಕ್ಕೆ ಬರುತ್ತಿಲ್ಲ. ಹೀಗಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಸದ್ಯ 6 ಲಕ್ಷಕ್ಕೂ ಅಧಿಕ ಸಕ್ರಿಯ ಕೋವಿಡ್​​​ ಪ್ರಕರಣಗಳಿದ್ದು, 58,245 ಜನರು ಸಾವನ್ನಪ್ಪಿದ್ದಾರೆ.

ABOUT THE AUTHOR

...view details