ಮುಂಬೈ:ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ತಗುಲಿದ್ದು, ಪರಿಣಾಮ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ.
ಮಹಾರಾಷ್ಟ್ರ: ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮ - ಮಹಾರಾಷ್ಟ್ರ ಕಾರಿಗೆ ಬೆಂಕಿ ಸುದ್ದಿ
ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ತಗುಲಿದ್ದು, ಪರಿಣಾಮ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಚಲಿಸುತ್ತಿದ್ದ ಕಾರಿಗೆ ಬೆಂಕಿ
ಪ್ರಾಥಮಿಕ ಮಾಹಿತಿಯ ಪ್ರಕಾರ, ಮುಲುಂಡ್ ಟೋಲ್ ನಾಕಾ ಬಳಿಯ ಆನಂದ್ ನಗರ ಪ್ರದೇಶದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಇಲ್ಲಿಯವರೆಗೆ ಯಾವುದೇ ಸಾವು ನೋವುಗಳು ಅಥವಾ ಗಾಯಗಳು ವರದಿಯಾಗಿಲ್ಲ.
ಹೇಮಂಗಿ ಜಂಗಿದ್ ಎಂಬವರಿಗೆ ಸೇರಿದ ವೋಕ್ಸ್‌ವ್ಯಾಗನ್ ವೆಂಟೊ ಕಾರು ಇದಾಗಿದೆ. ಮುಂಬೈ ಪೊಲೀಸ್, ಪ್ರಾದೇಶಿಕ ವಿಪತ್ತು ನಿರ್ವಹಣಾ ಪಡೆ, ಮುಂಬೈ ಅಗ್ನಿಶಾಮಕ ದಳ ಮತ್ತು ಥಾಣೆ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.