ಕರ್ನಾಟಕ

karnataka

ETV Bharat / bharat

ರೈಲ್ವೆ ನಿಲ್ದಾಣದ ಬಳಿ ಬಾಲಕಿ ಮೇಲೆ ಅತ್ಯಾಚಾರ: ಕಾಮುಕ ಅರೆಸ್ಟ್ - ಮಹಾರಾಷ್ಟ್ರ ರೇಪ್​ ಕೇಸ್​

ಥಾಣೆ ಜಿಲ್ಲೆಯ ಉಲ್ಲಾಸನಗರ ರೈಲ್ವೆ ನಿಲ್ದಾಣದ ಬಳಿ ಇರುವ ಕಟ್ಟಡವೊಂದಕ್ಕೆ ಕರೆದೊಯ್ದು 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಕಾಮುಕ ಅರೆಸ್ಟ್
ಕಾಮುಕ ಅರೆಸ್ಟ್

By

Published : Sep 12, 2021, 2:15 PM IST

ಥಾಣೆ (ಮಹಾರಾಷ್ಟ್ರ): ರೈಲ್ವೆ ನಿಲ್ದಾಣದ ಬಳಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ 35 ವರ್ಷದ ವ್ಯಕ್ತಿಯನ್ನು ಮಹಾರಾಷ್ಟ್ರದ ಥಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಶ್ರೀಕಾಂತ್ ಗಾಯಕ್ವಾಡ್ ಎಂದು ಗುರುತಿಸಲಾಗಿದೆ. ಥಾಣೆ ಜಿಲ್ಲೆಯ ಉಲ್ಲಾಸನಗರ ರೈಲ್ವೆ ನಿಲ್ದಾಣದಲ್ಲಿ ಮೊನ್ನೆ ಶುಕ್ರವಾರ ರಾತ್ರಿ ಸ್ಕೈವಾಕ್​​ನಲ್ಲಿ ತನ್ನ ಸ್ನೇಹಿತರೊಂದಿಗೆ ನಿಂತಿದ್ದ ಬಾಲಕಿಯನ್ನು ರೈಲ್ವೆ ನಿಲ್ದಾಣದ ಬಳಿ ಇರುವ ಕಟ್ಟಡವೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಆಕೆಯ ಸ್ನೇಹಿತರಿಗೆ ಸುತ್ತಿಗೆಯಿಂದ ಹೊಡೆದು ಹಲ್ಲೆ ಮಾಡುವುದಾಗಿ ಆತ ಬೆದರಿಕೆ ಹಾಕಿದ್ದು, ಭಯಭೀತರಾದ ಸ್ನೇಹಿತರು ಅಲ್ಲಿಂದ ಪರಾರಿಯಾಗಿದ್ದರು.

ಇದನ್ನೂ ಓದಿ: ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಬಾಲಕಿ ಆತ್ಮಹತ್ಯೆ ಮಾಡಿಕೊಂಡು ಸಾವು

ಕಲ್ಯಾಣ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ಪೊಲೀಸರು ಈ ಸಂಬಂಧ ದೂರು ನೀಡಿದ್ದರು. ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಇದೀಗ ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ. ಗಾಯಗೊಂಡಿರುವ ಸಂತ್ರಸ್ತೆಯನ್ನು ಪ್ರಸ್ತುತ ಉಲ್ಲಾಸ್ ನಗರದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details