ಪಾಲ್ಘರ್ (ಮಹಾರಾಷ್ಟ್ರ):ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಆಯತಪ್ಪಿ, ರೈಲಿನಡಿ ಬಿದ್ದ ಮಹಿಳೆಯನ್ನು ಪ್ರಯಾಣಿಕರು ರಕ್ಷಿಸಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಾಸೈ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Video: ಚಲಿಸುತ್ತಿದ್ದ ಟ್ರೈನ್ ಹತ್ತಲು ಹೋಗಿ ರೈಲಿನಡಿ ಸಿಲುಕಿದ ಮಹಿಳೆ.. ಕೂದಲೆಳೆ ಅಂತರದಲ್ಲಿ ಬಚಾವ್ - ಮಹಾರಾಷ್ಟ್ರದ ಪಾಲ್ಘರ್
ರೈಲು ಹತ್ತಲು ಹೋಗಿ ಆಯತಪ್ಪಿ ರೈಲಿನಡಿ ಸಿಲುಕಿದ ಮಹಿಳೆಯನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಕೂದಲೆಳೆ ಅಂತರದಲ್ಲಿ ಬಚಾವ್
ಭಾರತೀಯ ರೈಲ್ವೇ ಇಲಾಖೆಯು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಮಹಿಳೆಯು ರೈಲಿಗೆ ಹತ್ತಲು ಯತ್ನಿಸುತ್ತಿದ್ದಾಳೆ. ವೇಗವಾಗಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸುವ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ಕೂಡಲೇ ಪಕ್ಕದಲ್ಲಿದ್ದ ಪ್ರಯಾಣಿಕರು ಆಕೆಯನ್ನು ರಕ್ಷಿಸಿದ್ದಾರೆ.