ಮುಂಬೈ:ಕೊರೊನಾ ವೈರಸ್ ಹಾವಳಿಯ 2ನೇ ಅಲೆಗೆ ಮಹಾರಾಷ್ಟ್ರ ತತ್ತರಿಸಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದಲ್ಲಿ ಬರೋಬ್ಬರಿ 23,179 ಹೊಸ ಕೋವಿಡ್ ಸೋಂಕಿತರು ಕಂಡುಬಂದಿದ್ದಾರೆ.
ಲಾಕ್ಡೌನ್ ಜಾರಿಗೊಂಡಿರುವ ನಾಗ್ಪುರನಲ್ಲಿ 3,370 ಕೋವಿಡ್ ಕೇಸ್ ದಾಖಲಾಗಿದೆ. ಇಲ್ಲಿ 16 ಜನರು ಸಾವನ್ನಪ್ಪಿದ್ದಾರೆ. ಉಳಿದಂತೆ ರಾಜ್ಯದೆಲ್ಲೆಡೆ ಕಳೆದ 24 ಗಂಟೆಯಲ್ಲಿ 84 ಜನರು ಮಹಾಮಾರಿಗೆ ಪ್ರಾಣ ಕಳೆದುಕೊಂಡಿದ್ದಾರೆ.
ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ ನಾಗ್ಪುರ, ಅಮರಾವತಿಯಲ್ಲಿ ಲಾಕ್ಡೌನ್ ಹೇರಿಕೆ ಮಾಡಲಾಗಿದೆ.
ಪುಣೆಯಲ್ಲಿ ನೈಟ್ ಕರ್ಫ್ಯೂ ಜಾರಿಯಾಗಿದೆ. ಧಾರ್ಮಿಕ, ರಾಜಕೀಯ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ಆರಂಭಗೊಂಡಿದೆ ಎಂದು ಕೇಂದ್ರ ಸರ್ಕಾರ ಈಗಾಗಲೇ ಅಧಿಕೃತವಾಗಿ ತಿಳಿಸಿದ್ದು, ಇದೀಗ ಮತ್ತಷ್ಟು ನಗರಗಳಲ್ಲಿ ಲಾಕ್ಡೌನ್ ಜಾರಿಗೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಇದನ್ನೂ ಓದಿ: ಮತ್ತೆ ಶುರುವಾಯ್ತು ಕೋವಿಡ್ ಭೀತಿ : ಮುನ್ನೆಚ್ಚರಿಕೆ ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ!
ಉಳಿದಂತೆ ಪಂಜಾಬ್ನಲ್ಲಿ 2,039, ಗುಜರಾತ್ನಲ್ಲಿ 1,122, ದೆಹಲಿಯಲ್ಲಿ 536, ತಮಿಳುನಾಡಿನಲ್ಲಿ 945, ಕೇರಳ 2,098 ಹಾಗು ಗೋವಾದಲ್ಲಿ 73 ಹೊಸ ಕೇಸ್‌ಗಳು ದಾಖಲಾಗಿವೆ.