ನವದೆಹಲಿ:ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚೆತ್ತಿದೆ. ಒಂದೇ ದಿನದಲ್ಲಿ ಸುಮಾರು 31,855 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 15 ಸಾವಿರಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ.
ಕೊರೊನಾ ಸೋಂಕಿನ ಕಾರಣಕ್ಕೆ ಸುಮಾರು 95 ಮಂದಿ ಒಂದೇ ದಿನದಲ್ಲಿ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25,64,881 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 22,62,593ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಇಂದೂ ಕೊರೊನಾ ಅಬ್ಬರ: 2,298 ಜನರಲ್ಲಿ ಸೋಂಕು ಪತ್ತೆ
ಈವರೆಗೆ ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ 53 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸದ್ಯಕ್ಕೆ 2,47,299 ಮಂದಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೇರಳ ಮತ್ತು ಪಂಜಾಬ್ನಲ್ಲಿ ಕೊರೊನಾ ಏರಿಕೆ
ಕೇರಳದಲ್ಲಿ 2,456 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 2060 ಮಂದಿಯಲ್ಲಿ ನೆಗೆಟಿವ್ ವರದಿ ಕಂಡುಬಂದಿದೆ. ರಾಜ್ಯದಲ್ಲಿ 24,268 ಮಂದಿ ಸಕ್ರಿಯ ಸೋಂಕಿತರಿದ್ದು, ಈವರೆಗೆ 10,80,803 ಮಂದಿಗೆ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಪಂಜಾಬ್ನಲ್ಲಿ ಹೊಸದಾಗಿ 2634 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಒಂದೇ ದಿನದಲ್ಲಿ 1,455 ಮಂದಿ ಗುಣಮುಖರಾಗಿದ್ದು, 39 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2 ಲಕ್ಷದ 20 ಸಾವಿರಕ್ಕೆ ಏರಿಕೆಯಾಗಿದೆ.
ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2,20,276ಕ್ಕೆ ಏರಿಕೆಯಾಗಿದ್ದು, 1,93,280 ಮಂದಿ ಗುಣಮುಖರಾಗಿದ್ದಾರೆ.ಈವರೆಗಿನ ಮಾಹಿತಿಯಂತೆ 6,474 ಮಂದಿ ಮೃತಪಟ್ಟಿದ್ದು, 20,522 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.