ಮುಂಬೈ: ದಿನ ಕಳೆದಂತೆ ಮಹಾರಾಷ್ಟ್ರದಲ್ಲಿ ಎರಡನೇ ಹಂತದ ಕೋವಿಡ್ ಅಲೆ ಜೋರಾಗಿ ಬೀಸಲು ಶುರುವಾಗಿದ್ದು, ಇದೀಗ ಈ ಹಿಂದಿನಿಗಿಂತಲೂ ಅತ್ಯಧಿಕ ಕೋವಿಡ್ ಪ್ರಕರಣ ದಾಖಲಾಗಿದ್ದು, ಅಲ್ಲಿನ ಸರ್ಕಾರಕ್ಕೆ ಮತ್ತಷ್ಟು ತಲೆನೋವಾಗಿ ಪರಿಣಮಿಸಿದೆ.
ಕಳೆದ 24 ಗಂಟೆಗಳಲ್ಲಿ ದಾಖಲೆಯ 47, 827 ಕೋವಿಡ್ ಪ್ರಕರಣ ದಾಖಲಾಗಿದ್ದು, 202 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಪ್ರಮುಖವಾಗಿ ಮುಂಬೈನಲ್ಲೇ ದಾಖಲೆಯ 8832 ಕೋವಿಡ್ ಪ್ರಕರಣ ದಾಖಲಾಗಿದ್ದು, 20 ಜನರು ಸಾವನ್ನಪ್ಪಿದ್ದಾರೆ. ಉಳಿದಂತೆ ಪುಣೆ ಜಿಲ್ಲೆಯಲ್ಲಿ 9,086 ಕೋವಿಡ್ ಸೋಂಕಿತ ಪ್ರಕರಣ ಕಾಣಿಸಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 58 ಜನರು ಸಾವನ್ನಪ್ಪಿದ್ದಾರೆ. ನಿನ್ನೆ ಒಂದೇ ದಿನ 39,544 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದವು.