ಮುಂಬೈ:ಮಹಾರಾಷ್ಟ್ರದಲ್ಲಿ ಕೋವಿಡ್ ವೈರಸ್ನ ಎರಡನೇ ಅಲೆ ನಿಯಂತ್ರಣಕ್ಕೆ ಬರುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಕಳೆದ 24 ಗಂಟೆಯಲ್ಲಿ ದಾಖಲೆಯ 55,469 ಕೋವಿಡ್ ಕೇಸ್ ದಾಖಲಾಗುವ ಮೂಲಕ ಈ ಹಿಂದಿನ ಎಲ್ಲ ದಾಖಲೆ ಬ್ರೇಕ್ ಆಗಿದೆ.
ವಾಣಿಜ್ಯ ನಗರಿ ಮುಂಬೈನಲ್ಲೇ 10,030 ಕೋವಿಡ್ ಪ್ರಕರಣ ದಾಖಲಾಗಿದ್ದು, 31 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಕಳೆದ ಅಕ್ಟೋಬರ್ ನಂತರ ಅತಿ ಹೆಚ್ಚು ಜನರು ಸಾವನ್ನಪ್ಪಿರುವುದು ಇಂದೇ ಎಂದು ತಿಳಿದು ಬಂದಿದೆ. ಸದ್ಯ ಮಹಾರಾಷ್ಟ್ರದಲ್ಲಿ 31,13,354 ಕೋವಿಡ್ ಪ್ರಕರಣಗಳಿದ್ದು, ಇದರಲ್ಲಿ 4,72,283 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 56,330 ಜನರು ಸಾವನ್ನಪ್ಪಿದ್ದಾರೆ. ನಿತ್ಯ ಅತಿ ಹೆಚ್ಚು ಕೋವಿಡ್ ಪ್ರಕರಣ ಕಾಣಿಸಿಕೊಳ್ಳುತ್ತಿರುವ ಕಾರಣ ಆಸ್ಪತ್ರೆಗಳಲ್ಲಿ ಹಾಸಿಗೆ ಸಮಸ್ಯೆ ಉಲ್ಭಣಗೊಂಡಿದ್ದು, ರೋಗಿಗಳು ಆಕ್ಸಿಜನ್ ಸಿಗದೇ ಪರದಾಡುತ್ತಿದ್ದಾರೆ.