ಮುಂಬೈ:ಡೆಡ್ಲಿ ವೈರಸ್ ಕೊರೊನಾ ಅಬ್ಬರ ಮಹಾರಾಷ್ಟ್ರದಲ್ಲಿ ಜೋರಾಗಿದ್ದು, ಇದರ ಮಧ್ಯೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡುವುದಾಗಿ ಅಲ್ಲಿನ ಸರ್ಕಾರ ಘೋಷಿಸಿದೆ.
ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಈ ಘೋಷಣೆ ಮಾಡಿದ್ದು, ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿದ ಬಳಿಕ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹಾವಳಿ ಜೋರಾಗಿದ್ದು, ಕಳೆದ ಕೆಲ ದಿನಗಳಿಂದ ಪ್ರತಿದಿನ 60 ಸಾವಿರಕ್ಕೂ ಅಧಿಕ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ಈ ಮಧ್ಯೆ ಈ ಮಹತ್ವದ ಘೋಷಣೆ ಮಾಡಲಾಗಿದೆ.