ಪುಣೆ (ಮಹಾರಾಷ್ಟ್ರ): ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಮಹಾರಾಷ್ಟ್ರದಲ್ಲಿ ಸೋಂಕಿತರ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದು, ಇನ್ನೂ 15 ದಿನ ಲಾಕ್ಡೌನ್ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದರು ಆರೋಗ್ಯ ಸಚಿವ ರಾಜೇಶ್ ಟೋಪೆ, ಪಾಸಿಟಿವಿಟಿ ರೇಟ್ ಕಡಿಮೆಯಾಗುವರೆಗೂ ಬಿಕ್ಕಟ್ಟು ನಿವಾರಣೆಯಾಗಿದೆ ಎಂದು ನಾವು ಹೇಳಲಾಗುವುದಿಲ್ಲ ಎಂದಿದ್ದಾರೆ.
ಜಿಲ್ಲಾ ವಲಯದಲ್ಲಿ ಪಾಸಿಟಿವಿಟಿ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಮುಂದೆ 15 ದಿನಗಳವರೆಗೂ ಲಾಕ್ಡೌನ್ ಮುಂದುವರಿಸಲಿದ್ದೇವೆ ಎಂದಿದ್ದಾರೆ. ಆದರೆ ಕೊರೊನಾ ಕಡಿಮೆಯಾಗುತ್ತಿರುವ ಜಿಲ್ಲೆಗಳಲ್ಲಿ ಕೊಂಚ ಸಡಿಲಿಕೆಯಾಗಲಿದ್ದು, ರಾಜ್ಯದ ವಿವಿಧ ಕಡೆಗಳಲ್ಲಿ ಮೇ.30ರ ನಂತರ ಪರಿಶೀಲಿಸಿ ಸಿಎಂ ಈ ಬಗ್ಗೆ ನಿರ್ಧಾರ ಮಾಡಲಿದ್ದಾರೆ, ಅಲ್ಲದೇ ಜೂನ್ 1ರಂದು ಹೊಸ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಟೋಪೆ ತಿಳಿಸಿದ್ದಾರೆ.