ಮುಂಬೈ(ಮಹಾರಾಷ್ಟ್ರ):ಕಳೆದ ಐದು ತಿಂಗಳಲ್ಲಿ ರಾಜ್ಯದಲ್ಲಿ 1,076 ಅನ್ನದಾತರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಮಹಾರಾಷ್ಟ್ರ ಪರಿಹಾರ ಮತ್ತು ಪುನರ್ವಸತಿ ಸಚಿವ ವಿಜಯ್ ವಡೆತ್ತಿವಾರ್ ಸದನದಲ್ಲಿ ಮಾಹಿತಿ ನೀಡಿದ್ದಾರೆ.
ಪ್ರಶ್ನೋತ್ತರ ವೇಳೆ ಉತ್ತರ ನೀಡಿರುವ ಸಚಿವರು, 2021ರ ಜೂನ್ನಿಂದ ಅಕ್ಟೋಬರ್ ತಿಂಗಳಲ್ಲಿ ಇಷ್ಟೊಂದು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವರ ಪೈಕಿ 491 ಪ್ರಕರಣಗಳು ಆಯಾ ಜಿಲ್ಲಾ ಮಟ್ಟದ ಸಮಿತಿಗಳ ಮೂಲಕ ರಾಜ್ಯ ಸರ್ಕಾರದ ಮಹಾತ್ಮ ಜ್ಯೋತಿರಾವ್ ಫುಲೆ ಸಾಲ ಮನ್ನಾ ಯೋಜನೆಯಡಿ ಲಾಭ ಪಡೆದುಕೊಳ್ಳಲು ಅರ್ಹರೆಂದು ಘೋಷಣೆ ಮಾಡಿದ್ದು, ಈ ರೈತರಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದರು.